ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ನ ಅನುಭವಿ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ಗೆ ಭಾರತೀಯ ಕ್ರಿಕೆಟ್ ಮಂಡಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಇದರಿಂದ ಹಿರಿಯ ಪ್ಲೇಯರ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.
ಕೆರಿಬಿಯನ್ ಪ್ರೀಮಿಯರ್ ಲೀಗ್ನ ಪ್ರಚಾರ ಕಾರ್ಯದಲ್ಲಿ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡದ ಪ್ರರ ಕಾಣಿಸಿಕೊಂಡಿದ್ದಕ್ಕಾಗಿ ಅವರಿಗೆ ಬಿಸಿಸಿಐ ನೋಟಿಸ್ ಜಾರಿ ಮಾಡಿದೆ. 34 ವರ್ಷದ ದಿನೇಶ್ ಕಾರ್ತಿಕ್ ಟ್ರಿನ್ಬಾಗೋ ನೈಟ್ ರೈಡರ್ಸ್ ಡ್ರೆಸ್ಸಿಂಗ್ ರೂಮ್ನಲ್ಲಿ ಕಾಣಿಸಿಕೊಂಡು, ಸಿಪಿಎಲ್ ಉದ್ಘಾಟನಾ ಪಂದ್ಯದ ವೇಳೆ ಉಪಸ್ಥಿತವಿರುವುದೇ ಬಿಸಿಸಿಐ ಕೆಂಗಣ್ಣಿಗೆ ಕಾರಣವಾಗಿದೆ.
ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡ ಬಾಲಿವುಡ್ನ ಶಾರುಖ್ ಖಾನ್ ಮಾಲೀಕತ್ವದ ತಂಡವಾಗಿದೆ. ಇದು ಬಿಸಿಸಿಐ ಗಮನಕ್ಕೆ ಬರುತ್ತಿದ್ದಂತೆ ಬಿಸಿಸಿಐ ಸಿಇಒ ರಾಹುಲ್ ಜೋಹ್ರಾ ಇದರ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಭಾರತ ಪರ 26 ಟೆಸ್ಟ್, 94 ಏಕದಿನ ಮತ್ತು 32 ಟಿ20 ಪಂದ್ಯಗಳನ್ನು ಆಡಿರುವ ದಿನೇಶ್ ಕಾರ್ತಿಕ್, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿದ್ದಾರೆ. ವಿಶ್ವಕಪ್ ತಂಡದ ಸದಸ್ಯರಾಗಿದ್ದ ಇವರು ಎರಡು ಪಂದ್ಯಗಳಿಂದ 8 ಹಾಗೂ 6ರನ್ಗಳಿಕೆ ಮಾಡಿದ್ದರು.