ಸಿಡ್ನಿ (ಆಸ್ಟ್ರೇಲಿಯಾ): ಟೀಂ ಇಂಡಿಯಾದ ಕೆಲ ಆಟಗಾರರು ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪದ ನಂತರ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಎಲ್ಲರ ವರದಿಗಳು ನೆಗೆಟಿವ್ ಬಂದಿದೆ.
ರೋಹಿತ್ ಶರ್ಮಾ, ಪೃಥ್ವಿ ಶಾ, ರಿಷಭ್ ಪಂತ್, ಶುಬ್ಮನ್ ಗಿಲ್ ಮತ್ತು ನವದೀಪ್ ಸೈನಿ ಮೆಲ್ಬೋರ್ನ್‌ನ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
"ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ಮತ್ತು ಸಹಾಯಕ ಸಿಬ್ಬಂದಿ ಜನವರಿ 3 ರಂದು ಕೋವಿಡ್ -19 ಸೋಂಕಿನ ಪತ್ತೆಗಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾದರು. ಎಲ್ಲರ ವರದಿ ನೆಗೆಟಿವ್ ಬಂದಿದೆ" ಎಂದು ಬಿಸಿಸಿಐ ತಿಳಿಸಿದೆ.
ಐವರು ಭಾರತೀಯ ಆಟಗಾರರು ಬಯೋ - ಬಬಲ್ ಪ್ರೋಟೋಕಾಲ್‌ನಲ್ಲಿ ಉಲ್ಲಂಘನೆ ಆರೋಪದ ಬಗ್ಗೆ ಆಸ್ಟ್ರೇಲಿಯಾದ ಮಾಧ್ಯಮಗಳು ಚರ್ಚೆ ನಡೆಸುತ್ತಲೇ ಇದ್ದರೂ, ಹೊರಗಿನ ಪ್ರಪಂಚದ ಜೊತೆ ಸಂಪರ್ಕ ಕಡಿಕುಕೊಂಡಿರುವ ಟೀಂ ಇಂಡಿಯಾ ಆಟಗಾರರು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಜ.7 ರಂದು ಆಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದತ್ತ ಗಮನ ಹರಿಸಿದ್ದಾರೆ.
ಮಾಧ್ಯಮಗಳಲ್ಲಿನ ವರದಿಗಳು ಆಟಗಾರರಿಗೆ ಯಾವುದೇ ರೀತಿಯ ಅಡ್ಡಿಯಾಗುವುದಿಲ್ಲ.1-1ರಲ್ಲಿ ಸರಣಿ ಸಮವಾಗಿರುವುದರಿಂದ ಮೂರನೇ ಟೆಸ್ಟ್‌ಗೆ ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.