ಬ್ರಿಸ್ಬೇನ್: ವಿಕ್ಟೋರಿಯಾದಲ್ಲಿ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಮೆಲ್ಬೋರ್ನ್ನಿಂದ ಅಡಿಲೇಡ್ಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ.
ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ಪತ್ರಿಕೆಯ ವರದಿಯ ಪ್ರಕಾರ, ಡಿಸೆಂಬರ್ 26ರಿಂದ 30 ವರೆಗೆ ನಡೆಯಬೇಕಿದ್ದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಅಡಿಲೇಡ್ಗೆ ಶಿಫ್ಟ್ ಮಾಡಲು ಕ್ರಿಕೆಟ್ ಆಸ್ಟ್ರೇಲಿಯಾ ಚಿಂತಿಸುತ್ತಿದೆ. ಈ ವರದಿಯ ಪ್ರಕಾರ, ಅಡಿಲೇಡ್ ಕೂಡ ಈ ಪಂದ್ಯವನ್ನು ನಡೆಸಲು ಮಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.
ವಿಕ್ಟೋರಿಯಾ ರಾಜ್ಯದ ಪರಿಸ್ಥಿತಿ ಉತ್ತಮವಾಗಿಲ್ಲ. ಅಲ್ಲಿ 1300 ಕೋವಿಡ್ ಪ್ರಕರಣಗಳಿದ್ದು, 170 ಮಂದಿ ಬಲಿಯಾಗಿದ್ದಾರೆ. ಹಾಗಾಗಿ, ಪ್ರಸ್ತುತ ವೇಳಾಪಟ್ಟಿಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ವರದಿ ಹೇಳುತ್ತದೆ.
ಭಾರತ 4 ಟೆಸ್ಟ್ ಪಂದ್ಯಗಳಿಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಮೊದಲ ಟೆಸ್ಟ್ ಡಿಸೆಂಬರ್ 3 ರಿಂದ ಆರಂಭವಾಗಲಿದೆ.