ETV Bharat / sports

ಕೊರೊನಾ ಪರಿಸ್ಥಿತಿ ನಿರ್ವಹಣೆ: ಕಾಂಗ್ರೆಸ್ ಕಾರ್ಯಪಡೆಯಿಂದ ಮಹತ್ವದ ಚರ್ಚೆ

ಕಾಂಗ್ರೆಸ್ ಕಾರ್ಯಪಡೆ ಸಕ್ರಿಯವಾಗಿ ಈ ಭಾಗದ ಸಮಸ್ಯೆಗಳನ್ನು ಅರಿಯುವ ಪ್ರಯತ್ನ ಮಾಡಬೇಕು. ಕಾರ್ಯಪಡೆ ಮೂಲಕ ಅಗತ್ಯ ಮುನ್ನೆಚ್ಚರಿಕೆ ಹಾಗೂ ಜಾಗೃತಿ ಮೂಡಿಸುವ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಿ ಆಗಬೇಕು. ಸಮಸ್ಯೆ ಇರುವ ನಾಗರಿಕರನ್ನು ಪತ್ತೆ ಮಾಡಿ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಕಾರ್ಯ ಮಾಡಬೇಕು. ಪ್ರಮುಖ ರಾಷ್ಟ್ರೀಯ ಪಕ್ಷವಾಗಿ ಸರ್ಕಾರಕ್ಕೆ ಸಲಹೆ ಸೂಚನೆ ನೀಡುವ ಜೊತೆಗೆ ಅದಕ್ಕೆ ಪರ್ಯಾಯವಾಗಿ ಸಮರ್ಥ ಕಾರ್ಯನಿರ್ವಹಣೆ ಮಾಡಬೇಕೆಂಬ ಸೂಚನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಪಡೆ ಪ್ರಮುಖರಿಗೆ ನೀಡಿದರು.

ಕಾಂಗ್ರೆಸ್​ ಕಾರ್ಯಪಡೆಯಿಂದ ಸಭೆ
ಕಾಂಗ್ರೆಸ್​ ಕಾರ್ಯಪಡೆಯಿಂದ ಸಭೆ
author img

By

Published : Apr 15, 2020, 3:39 PM IST

ಬೆಂಗಳೂರು: ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆ ನಡೆಯಿತು.

ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಯ್ದ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕಳೆದ ಒಂದು ವಾರದ ಈಚೆ ಸಾಕಷ್ಟು ಪ್ರಕರಣಗಳು ಕಂಡುಬರುತ್ತಿವೆ. ಮೈಸೂರಿನ ನಂಜನಗೂಡು ಔಷಧ ಕಾರ್ಖಾನೆ ಸಿಬ್ಬಂದಿ ಮಹಾಮಾರಿಗೆ ತುತ್ತಾಗುತ್ತಿರುವುದು ಹೆಚ್ಚಾಗುತ್ತಿದೆ. ಕಲಬುರ್ಗಿ, ವಿಜಯಪುರ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ ದಕ್ಷಿಣ ಕನ್ನಡ ಉತ್ತರ ಕನ್ನಡ ಮಂಡ್ಯ ಸೇರಿದಂತೆ ರಾಜ್ಯದ ಒಟ್ಟು 20 ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

ಕಾಂಗ್ರೆಸ್ ಕಾರ್ಯಪಡೆ ಸಕ್ರಿಯವಾಗಿ ಈ ಭಾಗದ ಸಮಸ್ಯೆಗಳನ್ನು ಅರಿಯುವ ಪ್ರಯತ್ನ ಮಾಡಬೇಕು. ಕಾರ್ಯಪಡೆ ಮೂಲಕ ಅಗತ್ಯ ಮುನ್ನೆಚ್ಚರಿಕೆ ಹಾಗೂ ಜಾಗೃತಿ ಮೂಡಿಸುವ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಿ ಆಗಬೇಕು. ಸಮಸ್ಯೆ ಇರುವ ನಾಗರಿಕರನ್ನು ಪತ್ತೆ ಮಾಡಿ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಕಾರ್ಯ ಮಾಡಬೇಕು. ಪ್ರಮುಖ ರಾಷ್ಟ್ರೀಯ ಪಕ್ಷವಾಗಿ ಸರ್ಕಾರಕ್ಕೆ ಸಲಹೆ ಸೂಚನೆ ನೀಡುವ ಜೊತೆಗೆ ಅದಕ್ಕೆ ಪರ್ಯಾಯವಾಗಿ ಸಮರ್ಥ ಕಾರ್ಯನಿರ್ವಹಣೆ ಮಾಡಬೇಕೆಂಬ ಸೂಚನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಪಡೆ ಪ್ರಮುಖರಿಗೆ ನೀಡಿದರು.

ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್​ ಜಾರಿಯಲ್ಲಿ ಇರಲಿದೆ. ಈ ಸಂದರ್ಭ ನಮ್ಮ ಕಾರ್ಯಕ್ಷಮತೆ ಅತ್ಯಂತ ಪ್ರಮುಖವಾಗಿ ಇರಲಿ. ಜನರಿಗೆ ಎಲ್ಲೆಲ್ಲಿ ಏನೇನು ತೊಂದರೆಯಾಗುತ್ತಿದೆ ಎನ್ನುವುದನ್ನು ಪ್ರಮುಖವಾಗಿ ಗಮನಿಸುತ್ತೀರಿ. ಸಾಧ್ಯವಾದಷ್ಟು ಪರಿಹರಿಸಲು ಪ್ರಯತ್ನಿಸೋಣ. ಅಗತ್ಯವೆನಿಸಿದಲ್ಲಿ ಸರ್ಕಾರದ ಗಮನಕ್ಕೆ ತರುವ ಪ್ರಯತ್ನವನ್ನು ಮಾಡೋಣ. ಜನಜಾಗೃತಿ ಮೂಡಿಸುವ ಜೊತೆಗೆ ತಮ್ಮ ಸಹಾಯ ಹಸ್ತ ಇನ್ನಷ್ಟು ಚಾಚುವ ಎಂದು ಕರೆಕೊಟ್ಟರು.

ಈಗಾಗಲೇ ಪಕ್ಷದಿಂದ ಸಾಕಷ್ಟು ಸೂಚನೆಗಳನ್ನು ಕಾಂಗ್ರೆಸ್ ಮುಖಂಡರಿಗೆ ನೀಡಿದ್ದು, ಅದು ಪಾಲನೆಯಾಗುತ್ತಿದೆ ಎನ್ನುವುದನ್ನು ಗಮನಿಸಿ. ವಿವಿಧಡೆ ಕಾರ್ಮಿಕರು ಮತ್ತು ಬಡವರಿಗೆ ಆಹಾರ ಸಾಮಗ್ರಿ ವಿತರಿಸುವ ಹಾಗೂ ರೈತರಿಂದ ತರಕಾರಿ ಹಣ್ಣುಗಳನ್ನು ಖರೀದಿಸಿ ಅಗತ್ಯವಿರುವವರಿಗೆ ಪೂರೈಸುವ ಕಾರ್ಯವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎನ್ನುವುದನ್ನು ವೀಕ್ಷಿಸಿ ಎಂದು ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.