ಮೆಲ್ಬೋರ್ನ್: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ತಲುಪುವುದು ಖಚಿತವಾದರೆ, ಮುಂದಿನ ವರ್ಷವೇ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಜೊತೆ ಮಾತನಾಡಲಿದ್ದೇವೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮುಖ್ಯ ಕಾರ್ಯನಿರ್ವಾಹಕ ಕೆವಿನ್ ರಾಬರ್ಟ್ಸ್ ಹೇಳಿದ್ದಾರೆ.
ತಮ್ಮ ಕೊನೆಯ ಆಸ್ಟ್ರೇಲಿಯಾ ಪ್ರವಾಸದಲ್ಲಿ ಪಿಂಕ್ ಬಾಲ್ ಟೆಸ್ಟ್ ಆಡಲು ಭಾರತ ನಿರಾಕರಿಸಿತ್ತು. ಈಗ ಪರಿಸ್ಥಿತಿಗಳು ಬದಲಾಗಿವೆ. ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರಕ್ಕೆ ಬಂದ ನಂತರ ಬಾಂಗ್ಲಾದೇಶದ ವಿರುದ್ಧ ಪಿಂಕ್ ಬಾಲ್ ಟೆಸ್ಟ್ ಆಯೋಜಿಸಿದ್ದರು ಎಂದರು.
ಈ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುವ ಮೂಲಕ ಮೊದಲ ಸ್ಥಾನದಲ್ಲಿದೆ. ಫೈನಲ್ಗೆ ತಲುಪುವ ವಿಶ್ವಾಸವೂ ಇದೆ. ನಮ್ಮ ವಿರುದ್ಧ ಹಗಲು-ರಾತ್ರಿ ಪಂದ್ಯ ಆಯೋಜಿಸುವಂತೆ ಸೌರವ್ ಗಂಗೂಲಿ ಅವರ ಒಪ್ಪಿಗೆ ಪಡೆಯಲು ಪ್ರಯತ್ನಿಸುತ್ತೇವೆ. ಈ ಕುರಿತು ಅವರೊಂದಿಗೆ ಚರ್ಚೆ ನಡೆಸಲಿದ್ದೇವೆ. ಎಲ್ಲವೂ ಅಂದುಕೊಂಡಂತಾದರೆ ಮುಂದಿನ ವರ್ಷವೇ ಪಿಂಕ್ ಬಾಲ್ ಟೆಸ್ಟ್ ಪಂದ್ಯ ನಡೆಯಲಿದೆ ಎಂದರು.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 360 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 176 ಅಂಕಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ.