ETV Bharat / sports

ಕುಕ್ಕೆ ಸುಬ್ರಹ್ಮಣ್ಯ ದರ್ಶನ ಪಡೆದ ಕ್ರಿಕೆಟರ್​ ಮನೀಷ್​ ಪಾಂಡೆ, ಪತ್ನಿ ಆಶ್ರಿತಾ - ಕ್ರಿಕೆಟರ್​ ಮನೀಷ್​ ಪಾಂಡೆ

ಭಾರತ ಕ್ರಿಕೆಟ್​ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​​​​​​ಮನ್​ ಮನೀಷ್​ ಪಾಂಡೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದುಕೊಂಡರು.

cricketer manish pandey visit kukke
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟರ್​
author img

By

Published : Mar 7, 2020, 2:43 PM IST

Updated : Mar 7, 2020, 4:21 PM IST

ಕುಕ್ಕೆ: ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್​ ಮನೀಷ್​ ಪಾಂಡೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿದ್ದಾರೆ. ಈ ವೇಳೆ, ಅವರ ಪತ್ನಿ ಆಶ್ರಿತಾ ಶೆಟ್ಟಿ ಸಾಥ್​ ನೀಡಿದರು.

cricketer manish pandey
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟರ್​ ಮನೀಷ್ ಪಾಂಡೆ, ಪತ್ನಿ ಆಶ್ರಿತಾ

ತುಳುನಾಡಿನ ಪ್ರಸಿದ್ಧ ನಾಗ ಕ್ಷೇತ್ರ ಎಂದು ಪ್ರಸಿದ್ಧಿ ಪಡೆದುಕೊಂಡಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿರುವ ಅವರು, ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಕಳೆದ ಡಿಸೆಂಬರ್ ತಿಂಗಳಲ್ಲಿ ಮನೀಶ್ ಪಾಂಡೆ ತುಳುನಾಡಿನ ಬೆಡಗಿ ತಮಿಳು ಹಾಗೂ ತುಳು ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ವಿವಾಹದ ಬಳಿಕ ದಂಪತಿ ಕುಕ್ಕೆ ಕ್ಷೇತ್ರಕ್ಕೆ ಮೊದಲ ಭೇಟಿ ನೀಡಿದ್ದಾರೆ. ಮಾ. 6ರಂದು ಕುಕ್ಕೆ ಸುಬ್ರಹಣ್ಯಕ್ಕೆ ಆಗಮಿಸಿದ್ದ ಇವರು, ಇಲ್ಲಿನ ಖಾಸಗಿ ಹೋಟೆಲ್​ವೊಂದರಲ್ಲಿ ಉಳಿದುಕೊಂಡಿದ್ದರು.

cricketer manish pandey
ಕುಕ್ಕೆ ಕ್ಷೇತ್ರದಲ್ಲಿ ಮನೀಷ್​ ಪಾಂಡೆ ಕುಟುಂಬ

ಇಂದು ಬೆಳಗ್ಗೆ ದಂಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿನ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಆದಿ ಸುಬ್ರಹ್ಮಣ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಕೆಲ ದಿನಗಳ ಹಿಂದೆ ಬಾಲಿವುಡ್​ ನಟ ಅಜಯ್​ ದೇವಗನ್​ ಕೂಡ ಈ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದರು.

Last Updated : Mar 7, 2020, 4:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.