ETV Bharat / sports

ಪಶ್ಚಿಮ ಬಂಗಾಳ ಚುನಾವಣೆ: ಟಿಎಂಸಿ ಪಕ್ಷ ಸೇರಿದ ಕ್ರಿಕೆಟರ್​ ಮನೋಜ್ ತಿವಾರಿ! - ಮನೋಜ್​ ತಿವಾರಿ ಕೋಲ್ಕತ್ತಾ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಇದೀಗ ರಾಜಕೀಯ ಇನ್ನಿಂಗ್ಸ್​​ ಆರಂಭಿಸಲು ಸಜ್ಜುಗೊಂಡಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸೇರಿಕೊಂಡಿದ್ದಾರೆ.

Manoj Tiwary
Manoj Tiwary
author img

By

Published : Feb 24, 2021, 2:58 PM IST

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಆರಂಭಗೊಳ್ಳಲು ಕೆಲ ದಿನಗಳು ಮಾತ್ರ ಬಾಕಿ ಇದ್ದು, ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟರ್​ ಮನೋಜ್ ತಿವಾರಿ ತೃಣಮೂಲ ಕಾಂಗ್ರೆಸ್ ಸೇರಿಕೊಂಡಿದ್ದಾರೆ.

ದೇಶಿ ಕ್ರಿಕೆಟ್​ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಮನೋಜ್ ತಿವಾರಿ 2019ರಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಣೆ ಮಾಡಿದ್ದು, ಕೇವಲ ಕೆಲ ಏಕದಿನ ಹಾಗೂ ಟಿ-20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಪರ ಕಾಣಿಸಿಕೊಂಡಿದ್ದರು. ಇದರ ಜತೆಗೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​, ಕಿಂಗ್ಸ್ ಇಲೆವೆನ್​ ಪಂಜಾಬ್​ ಹಾಗೂ ರೇಸ್ಸಿಂಗ್​ ಪುಣೆ ಸೂಪರ್​ಜೈಂಟ್ಸ್ ತಂಡದ ಪರ ಆಡಿದ್ದಾರೆ.

  • A new journey begins from today. Need all your love & support. From now onwards this will be my political profile on Instagram.https://t.co/uZ9idMW7lD

    — MANOJ TIWARY (@tiwarymanoj) February 24, 2021 " class="align-text-top noRightClick twitterSection" data=" ">

35 ವರ್ಷದ ಮನೋಜ್ ತಿವಾರಿ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಸೇರಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್​​ನಲ್ಲಿ ಮಾಹಿತಿ ಕೂಡ ಹಂಚಿಕೊಂಡಿದ್ದಾರೆ. ಮನೋಜ್ ತಿವಾರಿ ಟೀಂ ಇಂಡಿಯಾ ಪರ 12 ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಿದ್ದು, 302 ರನ್ ​ಗಳಿಸಿದ್ದಾರೆ. 2008 ರಿಂದ 2018ರವರೆಗೆ 98 ಐಪಿಎಲ್​ ಪಂದ್ಯಗಳನ್ನಾಡಿರುವ ಇವರು 1695 ರನ್​ ಗಳಿಕೆ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.