ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ದಿವಂಗತ ಅರುಣ್ ಜೇಟ್ಲಿ ಅವರ ಸ್ಮರಣಾರ್ಥವಾಗಿ ನವದೆಹಲಿಯಲ್ಲಿರುವ ಫಿರೋಜ್ ಷಾ ಕೋಟ್ಲಾ ಮೈದಾನಕ್ಕೆ ಇವರ ಹೆಸರು ಇಡಲು ನಿರ್ಧಾರ ಮಾಡಲಾಗಿದೆ.
ಡೆಲ್ಲಿ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ರಜತ್ ಶರ್ಮಾ ಇದರ ಬಗ್ಗೆ ಮಾಹಿತಿ ನೀಡಿದ್ದು, ಅರುಣ್ ಜೇಟ್ಲಿ ಟೀಂ ಇಂಡಿಯಾ ತಂಡಕ್ಕೆ ಸೇರಿಕೊಳ್ಳಲು ವಿರಾಟ್ ಕೊಹ್ಲಿ, ಗೌತಮ್ ಗಂಭೀರ್,ವಿರೇಂದ್ರ ಸೆಹ್ವಾಗ್,ಆಶಿಸ್ ನೆಹ್ರಾ, ರಿಷಭ್ ಪಂತ್ ಸೇರಿದಂತೆ ಅನೇಕ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ ಎಂದು ಇದೇ ವೇಳೆ ತಿಳಿಸಿದ್ದಾರೆ.
ಅರುಣ್ ಜೇಟ್ಲಿ ಈ ಹಿಂದೆ ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದು, ಬಿಸಿಸಿಐ ಉಪಾಧ್ಯಕ್ಷರಾಗಿ ಹಾಗೂ ಐಪಿಎಲ್ನ ಆಡಳಿತ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಈಗಾಗಲೇ ಟೀಂ ಇಂಡಿಯಾ ದಾಖಲೆಯ ಸರದಾರ, ನಾಯಕ ವಿರಾಟ್ ಕೊಹ್ಲಿ ಅವರ ಹೆಸರನ್ನು ಪ್ರಸಿದ್ಧ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂನ ಒಂದು ಸ್ಟ್ಯಾಂಡ್ಗೆ ಇಡಲು ದೆಹಲಿ ಕ್ರಿಕೆಟ್ ಅಸೋಸಿಯೇಷನ್ ನಿರ್ಧಾರ ಮಾಡಿದೆ. ಸೆಪ್ಟೆಂಬರ್ 12 ರಂದು ಇದರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಕ್ರೀಡಾ ಸಚಿವ ಕಿರಣ್ ರಿಜಿಜು ಭಾಗವಹಿಸಲಿದ್ದಾರೆ.