ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದು ಶ್ರೇಯಸ್ ಅಯ್ಯರ್ ಪಡೆ ಬೌಲಿಂಗ್ ಆಯ್ದುಕೊಂಡಿದೆ. ಅಬುಧಾಬಿ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದೆ.
ಆಡಿರುವ 10 ಪಂದ್ಯಗಳಲ್ಲಿ ಕೋಲ್ಕತ್ತಾ 5ರಲ್ಲಿ ಗೆಲುವು ಸಾಧಿಸಿ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ 10ರಲ್ಲಿ 7 ಪಂಧ್ಯ ಗೆದ್ದಿದ್ದು, ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವ ಇರಾದೆ ಇಟ್ಟುಕೊಂಡಿದೆ.
-
#DelhiCapitals have won the toss and they will bowl first against #KKR.#Dream11IPL pic.twitter.com/JOARMdHjsc
— IndianPremierLeague (@IPL) October 24, 2020 " class="align-text-top noRightClick twitterSection" data="
">#DelhiCapitals have won the toss and they will bowl first against #KKR.#Dream11IPL pic.twitter.com/JOARMdHjsc
— IndianPremierLeague (@IPL) October 24, 2020#DelhiCapitals have won the toss and they will bowl first against #KKR.#Dream11IPL pic.twitter.com/JOARMdHjsc
— IndianPremierLeague (@IPL) October 24, 2020
ಡೆಲ್ಲಿ ಬ್ಯಾಟಿಂಗ್ ಪಡೆ ಬಲಿಷ್ಠವಾಗಿದೆ. ಆದರೆ, ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಹೊರತುಪಡಿಸಿ ಯಾವೊಬ್ಬ ಆಟಗಾರರು ಕೂಡ ಉತ್ತಮ ಪ್ರದರ್ಶನ ತೋರಲಿಲ್ಲ. ಪೃಥ್ವಿ ಶಾ ಕಳೆದ ಕೆಲ ಪಂದ್ಯಗಳಿಂದ ವೈಫಲ್ಯ ಅನುಭವಿಸುತ್ತಿದ್ದಾರೆ. ಶ್ರೇಯಸ್ ಐಯ್ಯರ್, ಪಂತ್, ಸ್ಟೊಯ್ನೀಸ್ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ತೋರಿದ್ದಾರೆ. ಕಳೆದ 2 ಪಂದ್ಯಗಳಲ್ಲಿ ಶತಕ ಸಿಡಿಸಿರುವ ಶಿಖರ್ ಧವನ್ ಡೆಲ್ಲಿಗೆ ಭರವಸೆಯ ಆಟಗಾರರಾಗಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಕ್ಯಾಪಿಟಲ್ಸ್ ಮೇಲುಗೈ ಹೊಂದಿದೆ. ಕಗಿಸೊ ರಬಾಡ, ನೋರ್ಟ್ಜೆ, ಅಕ್ಸರ್ ಪಟೇಲ್, ಆರ್.ಅಶ್ವಿನ್, ಸ್ಟೋಯ್ನಿಸ್ ಉತ್ತಮವಾಗಿ ಸ್ಪೆಲ್ ಮಾಡುತ್ತಿದ್ದಾರೆ.
ಬಲಿಷ್ಠ ತಂಡಗಳ ವಿರುದ್ಧ ಗೆಲುವು ಸಾಧಿಸಿದ್ದ ಕೆಕೆಆರ್, ಕಳೆದ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹೀನಾಯ ಸೋಲು ಕಂಡಿತ್ತು. ಬೆಂಗಳೂರು ಬೌಲಿಂಗ್ ದಾಳಿಗೆ ಕೆಕೆಆರ್ ಬ್ಯಾಟ್ಸ್ಮನ್ಗಳು ಪೆವಿಲಿಯನ್ ಸೇರಿದ್ರು. ಆದರೆ, ಇಂದಿನ ಪಂದ್ಯ ಕೆಕೆಆರ್ಗೆ ಮಹತ್ವದ್ದಾಗಿದ್ದು, ಶುಬ್ಮನ್ ಗಿಲ್, ನಿತೀಶ್ ರಾಣ, ತ್ರಿಪಾಠಿ, ಮಾರ್ಗನ್, ದಿನೇಶ್ ಕಾರ್ತಿಕ್ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.
ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಇಲ್ಲಿಯವರೆಗೆ 25 ಬಾರಿ ಮುಖಾಮುಖಿಯಾಗಿದ್ದು, 13ರಲ್ಲಿ ಕೆಕೆಆರ್ ಗೆಲುವು ಸಾಧಿಸಿದ್ರೆ, 12 ಪಂದ್ಯದಲ್ಲಿ ಡೆಲ್ಲಿ ಜಯದ ನಗೆ ಬೀರಿದೆ.
ತಂಡ ಇಂತಿವೆ
ಕೋಲ್ಕತ್ತಾ ನೈಟ್ ರೈಡರ್ಸ್: ಶುಬ್ಮನ್ ಗಿಲ್, ಸುನಿಲ್ ನರೈನ್, ನಿತಿಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್(ಕ್ಯಾಪ್ಟನ್), ದಿನೇಶ್ ಕಾರ್ತಿಕ್, ಕುಮ್ಮಿನ್ಸ್, ಫರ್ಗ್ಯುಸನ್, ಕಮಲೇಶ್ ನಾಗರಕೊಟಿ,ಪ್ರಸಿದ್ಧ ಕೃಷ್ಣ, ವರುಣ್ ಚಕ್ರವರ್ತಿ
ಡೆಲ್ಲಿ ಕ್ಯಾಪಿಟಲ್ಸ್: ಶಿಖರ್ ಧವನ್, ರಹಾನೆ, ಶ್ರೇಯಸ್ ಅಯ್ಯರ್(ಕ್ಯಾಪ್ಟನ್), ರಿಷಭ್ ಪಂತ್(ವಿ,ಕೀ), ಸ್ಟೋನಿಸ್, ಶಿಮ್ರಾನ್ ಹೆಟ್ಮಾಯರ್, ಅಕ್ಸರ್ ಪಟೇಲ್, ಆರ್.ಅಶ್ವಿನ್, ಕಾಗಿಸೋ ರಬಾಡಾ, ತುಷಾರ್ ದೇಶಪಾಂಡೆ,ನೊರ್ಥಾಜ್