ಲಂಡನ್: 2021ರಲ್ಲಿ ಟಿ-20 ಕ್ರಿಕೆಟ್ ಟೂರ್ನಿಗಾಗಿ ಪಾಕಿಸ್ತಾನವು ಇಂಗ್ಲೆಂಡ್ ತಂಡವನ್ನು ಆಹ್ವಾನಿಸಿದೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ತಿಳಿಸಿದೆ.
"ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಯೊಂದಿಗೆ ಚರ್ಚಿಸಿದ ನಂತರ, 2021ರ ಆರಂಭದಲ್ಲಿ ಟಿ20 ಸರಣಿಗೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಆಹ್ವಾನ ಬಂದಿದೆ" ಎಂದು ಇಸಿಬಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಪಾಕಿಸ್ತಾನದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೆ ನಿಧಾನವಾಗಿ ಪ್ರಾರಂಭವಾಗುತ್ತಿರುವ ಅಂಶವನ್ನು ನಾವು ಸ್ವಾಗತಿಸುತ್ತೇವೆ. ಇದರ ಮತ್ತಷ್ಟು ಅಭಿವೃದ್ಧಿಗೆ ಸಹಾಯ ಮಾಡಲು ನಾವು ಬದ್ಧರಾಗಿದ್ದೇವೆ ಎಂದಿದೆ.
ಇಂಗ್ಲೆಂಡ್ ಪಾಕ್ ಪ್ರವಾಸ ಕೈಗೊಳ್ಳುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಆದರೆ ಈ ಬಗ್ಗೆ ಪಾಕಿಸ್ತಾನದೊಂದಿಗೆ ಚರ್ಚೆ ನಡೆಸುವುದಾಗಿ ಇಸಿಬಿ ಹೇಳಿದೆ. ಇಂಗ್ಲೆಂಡ್, 2005 ರಿಂದ ಪಾಕಿಸ್ತಾನ ಪ್ರವಾಸ ಮಾಡಿಲ್ಲ. ಫ್ಯೂಚರ್ ಟೂರ್ಸ್ ಪ್ರೋಗ್ರಾಂ (ಎಫ್‌ಟಿಪಿ) ಪ್ರಕಾರ ಅವರ ಮುಂದಿನ ಪ್ರವಾಸವನ್ನು 2022 ರಲ್ಲಿ ಮಾತ್ರ ನಿಗದಿಪಡಿಸಲಾಗಿದೆ.