ETV Bharat / sports

ವೆಸ್ಟ್​​ ಇಂಡೀಸ್​ ವಿರುದ್ಧದ ಟೆಸ್ಟ್​ ಸರಣಿ: ಸಮಬಲ ಸಾಧಿಸಿದ ಇಂಗ್ಲೆಂಡ್​ - ಇಂಗ್ಲೆಂಡ್

ವೆಸ್ಟ್​​ ಇಂಡೀಸ್​ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಇಂಗ್ಲೆಂಡ್​ ತಂಡ 113 ರನ್​ಗಳ ಭರ್ಜರಿ ಗೆಲುವು ಬಾರಿಸಿದೆ. ಈ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಸಮಬಲ ಸಾಧಿಸಿದ ಇಂಗ್ಲೆಂಡ್​
ಸಮಬಲ ಸಾಧಿಸಿದ ಇಂಗ್ಲೆಂಡ್​
author img

By

Published : Jul 21, 2020, 7:58 AM IST

ಮ್ಯಾಂಚೆಸ್ಟರ್: ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್​ ತಂಡ ಎರಡನೇ ಟೆಸ್ಟ್​ನಲ್ಲಿ 113ರನ್​ಗಳ ಭರ್ಜರಿ ಗೆಲುವು ಸಾಧಿಸಿ, ಸರಣಿಯಲ್ಲಿ ಸಮಬಲ ಸಾಧಿಸಿದೆ.

ಸ್ಟುವರ್ಟ್​ ಬ್ರಾಡ್​ ಹಾಗೂ ಕ್ರಿಸ್​ ವೋಕ್​ ಅವರ ಬಿಗಿ ಬೌಲಿಂಗ್​ ದಾಳಿಯಿಂದಾಗಿ 2ನೇ ಟೆಸ್ಟ್​ ಪಂದ್ಯ ಗೆದ್ದು ವಿಂಡೀಸ್ ಪಡೆಗೆ ತಿರುಗೇಟು ನೀಡಿದೆ. ಇದರೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಿಂದ ಸಮಬಲ ಸಾಧಿಸುವ ಮೂಲಕ ಮೂರನೇ ಪಂದ್ಯ ಕುತೂಹಲ ಮೂಡುವಂತೆ ಮಾಡಿದೆ. ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 469 ರನ್​ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ 287 ರನ್ ಗಳಿಗೆ ಆಲೌಟ್ ಆಗಿತ್ತು.

ಬಳಿಕ ತನ್ನ 2ನೇ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ 129 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಈ ಮೂಲಕ ವೆಸ್ಟ್​ ಇಂಡೀಸ್​ ತಂಡಕ್ಕೆ 312 ರನ್​ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ವಿಂಡೀಸ್ 198 ರನ್​ಗಳಿಗೆ ಆಲೌಟ್ ಆಗಿದ್ದು 113 ರನ್​ಗಳಿಂದ ಸೋಲು ಕಂಡಿದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.