ಇಂಗ್ಲೆಂಡ್: ಪುಲ್ವಾಮಾ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ರದ್ದು ಮಾಡಬೇಕು ಎಂಬ ಮಾತು ಕೇಳಿಬರುತ್ತಿದೆ. ಭಾರತದ ಹಲವು ಮಾಜಿ ಆಟಗಾರರು ಕೂಡ ಭಾರತ ಪಾಕ್ ವಿರುದ್ಧ ಕ್ರಿಕೆಟ್ ಆಡಬಾರದು ಎಂದು ಹೇಳಿದ್ದಾರೆ. ಆದ್ರೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಇಂಗ್ಲೆಂಡ್ನ ಪ್ರಮುಖ ರೇಡಿಯೋವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ವಾನ್, 2017ರ ಚಾಂಪಿಯನ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆ ವರ್ಷ ಅತಿಹೆಚ್ಚು ವೀಕ್ಷಣೆಗೊಳಗಾಗಿತ್ತು. ಭಾರತ ಮತ್ತು ಪಾಕಿಸ್ತಾನ ಪಂದ್ಯ ಎಂದರೆ ಎಲ್ಲರಲ್ಲೂ ಕುತೂಹಲ ಹೆಚ್ಚಿರುತ್ತೆ. ಹಾಗಾಗಿ ಪ್ರತಿಯೊಬ್ಬರೂ ಮ್ಯಾಂಚೆಸ್ಟರ್ನ ಪಂದ್ಯಕ್ಕೆ ಎದುರುನೋಡುತಿದ್ದಾರೆ. ನನಗೂ ಕೂಡ ಪಂದ್ಯ ನಡೆಯುತ್ತೆ ಎಂಬ ವಿಶ್ವಸವಿದೆ ಎಂದಿದ್ದಾರೆ.
ಇನ್ನು ಭಾರತ ತಂಡದ ಹಲವು ಮಾಜಿ ಆಟಗಾರರು ಈ ಬಗ್ಗೆ ಮಾತನಾಡಿದ್ದು ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನ ರದ್ದು ಮಾಡಬೇಕು ಎಂದು ಕೇಳಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ನಾಯಕ ವಿರಾಟ್ ಕೊಹ್ಲಿ ಸರ್ಕಾರದ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ. ಬಿಸಿಸಿಐ ಮತ್ತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೋ ಅದನ್ನ ಗೌರವಿಸುತ್ತೇವೆ ಎಂದಿದ್ದರು.