ಅಹಮದಾಬಾದ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಆರಂಭಿಕ ಶುಬಮನ್ ಗಿಲ್ ಕಳಪೆ ಪ್ರದರ್ಶನ ಮುಂದುವರೆಸಿದ್ದು, ಇದೇ ವಿಷಯವಾಗಿ ವಿವಿಎಸ್ ಲಕ್ಷ್ಮಣ್ ಕೆಂಡಾಮಂಡಲವಾಗಿದ್ದಾರೆ.
ನಾಲ್ಕನೇ ಟೆಸ್ಟ್ ಮ್ಯಾಚ್ನ ಮೊದಲ ಇನ್ನಿಂಗ್ಸ್ನಲ್ಲಿ ಶುಬಮನ್ ಗಿಲ್ ತಾವು ಎದುರಿಸಿದ ಮೊದಲ ಓವರ್ನಲ್ಲೇ ಎಲ್ಬಿ ಬಲೆಗೆ ಬಿದ್ದು ವಿಕೆಟ್ ಒಪ್ಪಿಸಿದ್ದಾರೆ. ಜತೆಗೆ ಪ್ರಸಕ್ತ ಟೂರ್ನಿಯಲ್ಲಿ ಅವರ ಕಳಪೆ ಪ್ರದರ್ಶನ ಮುಂದುವರೆದಿರುವ ಕಾರಣ ಟೀಂ ಇಂಡಿಯಾ ಮಾಜಿ ಆಟಗಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗಬ್ಬಾದಲ್ಲಿ ಗಿಲ್ ಅಬ್ಬರಿಸಿದ ಪರಿಗೆ ಫಿದಾ ಆದ ವಿವಿಎಸ್ ಲಕ್ಷ್ಮಣ್
ಶುಬಮನ್ ಗಿಲ್ಗೆ ಸ್ವಲ್ಪ ತಾಂತ್ರಿಕ ಸಮಸ್ಯೆ ಇದೆ. ಜತೆಗೆ ಅವರು ಒತ್ತಡಕ್ಕೊಳಗಾಗುತ್ತಿದ್ದಾರೆ ಎಂದು ಹೇಳಿದ್ದಾರೆ. ಜತೆಗೆ ಟೆಸ್ಟ್ನಲ್ಲಿ ಆಡಲು ಕೆ.ಎಲ್.ರಾಹುಲ್, ಮಯಾಂಕ್ ಅಗರವಾಲ್ ಕಾಯುತ್ತಿದ್ದಾರೆ ಎಂದಿದ್ದಾರೆ. ಶುಬಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 1,14.11,15* ಹಾಗೂ 0 ರನ್ಗಳಿಕೆ ಮಾಡಿದ್ದು, ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ನಲ್ಲಿ ಟಾಸ್ ಸೋತು ಬ್ಯಾಟಿಂಗ್ ನಡೆಸಿರುವ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 205ರನ್ಗಳಿಕೆ ಮಾಡಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ 1ವಿಕೆಟ್ ನಷ್ಟಕ್ಕೆ 24ರನ್ಗಳಿಕೆ ಮಾಡಿ ನಾಳೆಗೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದೆ. ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧ ಗಬ್ಬಾ ಮೈದಾನದಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ 91ರನ್ಗಳಿಕೆ ಮಾಡಿದ್ದ ಗಿಲ್ ಪರ ಬ್ಯಾಟ್ ಮಾಡಿದ್ದ ಲಕ್ಷ್ಮಣ್ ಅದ್ಭುತವಾಗಿ ಆಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.