ಮುಂಬೈ: ಭಾರತ ತಂಡದ ಆಲ್ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಭಾರತೀಯ ಬೌಲರ್ ಮನ್ಪ್ರೀತ್ ಗೋನಿ ಬಿಸಿಸಿಐ ವ್ಯಾಪ್ತಿಗೆ ಒಳಪಡುವ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಕೆನಡಾದಲ್ಲಿ ನಡೆಯುವ ಗ್ಲೋಬಲ್ ಟಿ-20 ಲೀಗ್ನಲ್ಲಿ ಅವಕಾಶ ಬಂದಿರುವುದರಿಂದ ಗೋನಿ ಬಿಸಿಸಿಐ ವ್ಯಾಪ್ತಿಗೆ ಒಳಪಡುವ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ಹೊರ ಬಂದಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಇದೇ ಕಾರಣದಿಂದ ಯುವರಾಜ್ ಕೂಡಾ ನಿವೃತ್ತಿ ಘೋಷಿಸಿದ್ದರು.
ಗೋನಿ ಪಂಜಾಬ್ ಭಾರತ ತಂಡದ ಪರ 2 ಟಿ-20 ಪಂದ್ಯ , ಪಂಜಾಬ್ ತಂಡದ ಪರ 61 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯ ಆಡಿದ್ದರು. 2008ರಲ್ಲಿ ಹಾಂಗ್ಕಾಂಗ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು.
ಇನ್ನು ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್, ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಗುಜರಾತ್ ಲಯನ್ಸ್ ತಂಡಗಳನ್ನು ಪ್ರತಿನಿಧಿಸಿದ್ದು, 44 ಪಂದ್ಯಗಳಲ್ಲಿ 37 ವಿಕೆಟ್ ಪಡೆದಿದ್ದರು.
- — Manpreet Gony (@imMsgony) June 25, 2019 " class="align-text-top noRightClick twitterSection" data="
— Manpreet Gony (@imMsgony) June 25, 2019
">— Manpreet Gony (@imMsgony) June 25, 2019