ಮುಂಬೈ: ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಇದೀಗ ಚೇತರಿಕೆ ಕಾಣುತ್ತಿರುವ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಹೊರ ಬಿದ್ದಿದ್ದಾರೆ.
ಲಂಡನ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಈ ಆಟಗಾರ ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಲಂಡನ್ಗೆ ಪ್ರವಾಸ ಬೆಳೆಸಲಿರುವ ಪಾಂಡ್ಯ ಮತ್ತೊಮ್ಮೆ ವೈದ್ಯರಿಂದ ಸಲಹೆ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಹಾರ್ದಿಕ್ ಪಾಂಡ್ಯ ಮತ್ತು ಎನ್ಸಿಎ ಮುಖ್ಯ ಫಿಸಿಯೋ ಆಶಿಷ್ ಕೌಶಿಕ್ ಜೊತೆ ಲಂಡನ್ಗೆ ತೆರಳಲಿದ್ದು, ಅಲ್ಲಿ ಹಾರ್ದಿಕ್ ಪಾಂಡ್ಯ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯ ಜೇಮ್ಸ್ ಅಲಿಬೋನ್ ಅವರ ಬಳಿ ಸಲಹೆ ಪಡೆಯಲಿದ್ದಾರೆ. ಇದಾದ ಬಳಿಕ ಅವರು ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡುವ ಕುರಿತು ಚಿಂತನೆ ನಡೆಸಲಿದ್ದಾರೆ. ಹಾರ್ದಿಕ್ ಪಾಂಡ್ಯ 2019ರ ಸಪ್ಟೆಂಬರ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಟಿ-20 ಪಂದ್ಯದಲ್ಲಿ ಕೊನೆಯದಾಗಿ ಆಡಿದ್ದರು.