ETV Bharat / sports

ಐಸಿಸಿ ಏಕದಿನ ರ‍್ಯಾಂಕಿಂಗ್.. ಮೊದಲೆರಡು ಸ್ಥಾನದಲ್ಲಿ ವಿರಾಟ್-ರೋಹಿತ್, ಟಾಪ್​ ಮೂರರಲ್ಲಿ ಬುಮ್ರಾ!! - ರೋಹಿತ್ ಶರ್ಮಾ ಏಕದಿನ ರ‍್ಯಾಂಕಿಂಗ್

ಐಸಿಸಿ ಹೊಸದಾಗಿ ಬಿಡುಗಡೆ ಮಾಡಿರುವ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 870 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ರೆ, ಬೌಲರ್‌ಗಳ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನದಲ್ಲಿದ್ದಾರೆ..

ICC ODI ranking
ಐಸಿಸಿ ಏಕದಿನ ರ‍್ಯಾಂಕಿಂಗ್
author img

By

Published : Dec 10, 2020, 5:33 PM IST

Updated : Dec 10, 2020, 8:15 PM IST

ದುಬೈ : ಇತ್ತೀಚೆಗೆ ಮುಕ್ತಾಯವಾದ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ಅರ್ಧ ಶತಕ ಸಿಡಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ 3ನೇ ಸ್ಥಾನದಲ್ಲಿದ್ದಾರೆ.

ಐಸಿಸಿ ಹೊಸದಾಗಿ ಬಿಡುಗಡೆ ಮಾಡಿರುವ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 870 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ರೆ, ರೋಹಿತ್ ಶರ್ಮಾ 842 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ತಂಡದ ಆಟಗಾರ ಬಾಬರ್ ಅಜಮ್ 837 ಅಂಕ ಪಡೆದು 3ನೇ ಸ್ಥಾನ ಪಡೆದಿದ್ದಾರೆ.

ಬೌಲರ್​ಗಳ ಶ್ರೇಯಾಂಕದಲ್ಲಿ ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ 722 ಅಂಕಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ರೆ, 701 ಅಂಕ ಪಡೆದಿರುವ ಅಫ್ಘನ್​ ಸ್ಪಿನ್ನರ್ ಮುಜಿಬ್​ ಉರ್ ರಹಮಾನ್ ದ್ವಿತೀಯ ಸ್ಥಾನಕ್ಕೇರಿದ್ದು, 700 ಅಂಕ ಪಡೆದಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್​ ಬುಮ್ರಾ ತೃತೀಯ ಸ್ಥಾನಕ್ಕೆ ಕುಸಿದಿದ್ದಾರೆ.

ಆರ್​ರೌಂಡರ್​ಗಳ ಪಟ್ಟಿಯಲ್ಲಿ 373 ಅಂಕಗಳೊಂದಿಗೆ ಶಕಿಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿದ್ರೆ, ಅಫ್ಘನ್ ಕ್ರಿಕೆಟಿಗ ಮೊಹಮದ್ ನಬಿ 301 ಅಂಕಗಳೊಂದಿಗೆ ದ್ವಿತೀಯ ಮತ್ತು ಇಂಗ್ಲೆಂಡ್ ತಂಡದ ಕ್ರಿಸ್ ವೋಕ್ಸ್​ 281 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

Last Updated : Dec 10, 2020, 8:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.