ಹೈದರಾಬಾದ್: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಂ.1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಈ ಸರಣಿಗೂ ಮುನ್ನ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ರನ್ ಮೆಷಿನ್ ಸರಣಿ ಬಳಿಕವೂ ಅದೇ ಸ್ಥಾನವನ್ನು ಉಳಿಸಿಕೊಳ್ಳುವ ಮೂಲಕ ಬ್ಯಾಟಿಂಗ್ ದಿಗ್ಗಜರ ಸಾಲಿನಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೆ ಸಾಬೀತುಪಡಿಸಿಕೊಂಡಿದ್ದಾರೆ.
ಇನ್ನು ಬೌಲರ್ ಪಟ್ಟಿಯಲ್ಲಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ 4ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಬುಮ್ರಾ 690 ಪಾಯಿಂಟ್‌ಗಳನ್ನು ಹೊಂದಿದ್ದು ಬೌಲರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಮತ್ತು ಎರಡನೇ ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 56 ಮತ್ತು 66 ರನ್ ಗಳಿಸಿದ್ದ ಕೊಹ್ಲಿ ಒಟ್ಟು 870 ಅಂಕಗಳನ್ನು ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು 837 ಅಂಕ ಕಲೆ ಹಾಕಿರುವ ಪಾಕಿಸ್ತಾನದ ಬಾಬರ್ ಅಝಾಮ್ ದ್ವಿತೀಯ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: ಕೇವಲ 11 ಇನ್ನಿಂಗ್ಸ್ ಆಡಿ ಕೊಹ್ಲಿ, ರಾಹುಲ್ ಹಿಂದಿಕ್ಕಿದ ಕಿವೀಸ್ನ ಡಿವೋನ್ ಕಾನ್ವೆ!
825 ಪಾಯಿಂಟ್ಸ್ ಗಳಿಸಿರುವ ಭಾರತದ ಸೀಮಿತ ಓವರ್‌ಗಳ ಉಪನಾಯಕ ರೋಹಿತ್ ಶರ್ಮಾ ತೃತೀಯ ಸ್ಥಾನದಲ್ಲಿದ್ದಾರೆ. ಇನ್ನು 4ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ರಾಸ್ ಟೇಲರ್ ಇದ್ದರೆ, 5ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಆ್ಯರನ್ ಫಿಂಚ್ ಇದ್ದಾರೆ. ಕಳಪೆ ಪ್ರದರ್ಶನದಿಂದ ಟೀಕೆಗೆ ಒಳಗಾಗಿದ್ದ ಕನ್ನಡಿಗ ಕೆ.ಎಲ್. ರಾಹುಲ್ 31 ರಿಂದ 27ನೇ ಸ್ಥಾನಕ್ಕೆ ಏರಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 42ನೇ ಸ್ಥಾನವನ್ನು ಗಳಿಸಿದರೆ ರಿಷಭ್ ಪಂತ್ ಅಗ್ರ 100ರಲ್ಲಿ ಪ್ರವೇಶ ಪಡೆದಿದ್ದಾರೆ.
ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್, ಅಫ್ಘಾನಿಸ್ತಾನದ ಮುಜೀಬ್ ಉರ್ ರಹ್ಮಾನ್, ನ್ಯೂಜಿಲೆಂಡ್‌ನ ಮ್ಯಾಟ್ ಹೆನ್ರಿ ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದಿದ್ದಾರೆ. ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ 4ನೇ ಸ್ಥಾನಕ್ಕೆ ಕುಸಿದಿದ್ದಾರೆ.