ಮುಂಬೈ: ಐಸಿಸಿಯಿಂದ ಹೊಸ ಟೆಸ್ಟ್ ಶ್ರೇಯಾಂಕ ಪಟ್ಟಿ ರಿಲೀಸ್ ಆಗಿದ್ದು, ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಕಾಣಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಒಟ್ಟು 928 ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿದ್ದರೆ, 17 ಅಂಕ ಹಿಂದಿರುವ ಆಸ್ಟ್ರೇಲಿಯದ ಸ್ಟೀವ್ ಸ್ಮಿತ್ 2ನೇ ಸ್ಥಾನ ಹಾಗೂ ರಹಾನೆ ಒಂದು ಸ್ಥಾನ ಮೇಲೇರಿ 8ನೇ ಸ್ಥಾನಕ್ಕೆ ಬಂದಿದ್ದಾರೆ. ಇದರ ಮಧ್ಯೆ ಚೇತೇಶ್ವರ್ ಪೂಜಾರ 6ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭಾರತ ಮೂವರು ಆಟಗಾರರು ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಜಸ್‌ಪ್ರೀತ್ ಬುಮ್ರಾ 6ನೇ, ಅಶ್ವಿನ್ 8ನೇ ಸ್ಥಾನದಲ್ಲಿದ್ದರೆ, ಮೊಹಮ್ಮದ್ ಶಮಿ 10ರಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.
ಆಲ್ರೌಂಡರ್ ವಿಭಾಗದಲ್ಲಿ ಜಡೇಜಾ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದು, ಅಶ್ವಿನ್ 5ನೇ ಸ್ಥಾನದಲ್ಲಿದ್ದಾರೆ. ಈ ಹಿಂದೆ ಬ್ಯಾಟಿಂಗ್ ವಿಭಾಗದಲ್ಲಿ ಟಾಪ್ 10ರಲ್ಲಿ ಕಾಣಿಸಿಕೊಂಡಿದ್ದ ಮಯಾಂಕ್ ಅಗರವಾಲ್ ಇದೀಗ ಹೊರಬಿದ್ದಿದ್ದಾರೆ.