ETV Bharat / sports

ಗಬ್ಬಾದಲ್ಲಿ ಘರ್ಜಿಸಿ ಐಸಿಸಿ ರ‍್ಯಾಂಕಿಂಗ್​​ನಲ್ಲಿ 2ನೇ ಸ್ಥಾನಕ್ಕೇರಿದ ಭಾರತ ತಂಡ..

ಅಗ್ರಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ತಂಡ 118. 44 ಅಂಕ ಹೊಂದಿದ್ರೆ, ಭಾರತ ತಂಡ 117.65 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಸರಣಿ ಕಳೆದುಕೊಂಡಿರುವ ಆಸ್ಟ್ರೇಲಿಯಾ ತಂಡ 113 ಅಂಕಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ..

author img

By

Published : Jan 19, 2021, 4:17 PM IST

ಐಸಿಸಿ ಟೆಸ್ಟ್​ ರ್ಯಾಂಕಿಂಗ್
ಐಸಿಸಿ ಟೆಸ್ಟ್​ ರ್ಯಾಂಕಿಂಗ್

ಬ್ರಿಸ್ಬೇನ್ : ರಹಾನೆ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್​ ಗವಾಸ್ಕರ್ ಟ್ರೋಫಿ ಗೆಲ್ಲುತ್ತಿದ್ದಂತೆ ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್​ ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನಕ್ಕೇರಿದೆ.

ಮಂಗಳವಾರ ಆಸೀಸ್ ನೀಡಿದ 328 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಭಾರತ ತಂಡ ರಿಷಭ್ ಪಂತ್, ಪೂಜಾರ ಮತ್ತು ಶುಭಮನ್ ಗಿಲ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 7 ವಿಕೆಟ್​ ಕಳೆದುಕೊಂಡ ಜಯ ಸಾಧಿಸಿದೆ.

ಭಾರತ ಬ್ರಿಸ್ಬೇನ್​ನಲ್ಲಿ 32 ವರ್ಷಗಳಿಂದ ಸೋಲೇ ಕಾಣದ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿದು, ಐಸಿಸಿ ನೂತನ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. ಜೊತೆಗೆ ಮೊದಲ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ತಂಡಕ್ಕೆ ಹತ್ತಿರವಾಗಿದ್ದು, ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಗ್ರಸ್ಥಾನಕ್ಕೆ ಮರಳಲು ಎದುರು ನೋಡುತ್ತಿದೆ.

ಅಗ್ರಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ತಂಡ 118. 44 ಅಂಕ ಹೊಂದಿದ್ರೆ, ಭಾರತ ತಂಡ 117.65 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಸರಣಿ ಕಳೆದುಕೊಂಡಿರುವ ಆಸ್ಟ್ರೇಲಿಯಾ ತಂಡ 113 ಅಂಕಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.

4ನೇ ಸ್ಥಾನದಲ್ಲಿ ಇಂಗ್ಲೆಂಡ್ ತಂಡ(106), 5ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ(96), 6ರಲ್ಲಿ ಶ್ರೀಲಂಕಾ(86), 7ರಲ್ಲಿ ಪಾಕಿಸ್ತಾನ(82), 8ರಲ್ಲಿ ವೆಸ್ಟ್ ಇಂಡೀಸ್​(77) ಹಾಗೂ 9ರಲ್ಲಿ ಬಾಂಗ್ಲಾದೇಶ(55) ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.