ಸಿಡ್ನಿ (ಆಸ್ಟ್ರೇಲಿಯಾ): ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ಪರ ಇನ್ನಿಂಗ್ಸ್ ಆರಂಭಿಸಲಿದ್ದು, ವೇಗಿ ನವದೀಪ್ ಸೈನಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.
ನಾಳೆಯಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ 11ರ ಬಳಗವನ್ನು ಘೋಷಣೆ ಮಾಡಿದ್ದು ಕನ್ನಡಿಗ ಮಯಾಂಕ್ ಸ್ಥಾನ ಕಳೆದುಕೊಂಡಿದ್ದು, ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ರೋಹಿತ್ ಜೊತೆ ಗಿಲ್ ಆರಂಭಿಕನಾಗಿ ಮುಂದುವರೆಯಲಿದ್ದಾರೆ. ಗಾಯಾಳು ವೇಗಿ ಉಮೇಶ್ ಯಾದವ್ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದುಕೊಂಡಿದ್ದು, ನಾಳೆ ಚೊಚ್ಚಲ ಟೆಸ್ಟ್ ಪಂದ್ಯವಾಡಲಿದ್ದಾರೆ.
-
NEWS - #TeamIndia announce Playing XI for the 3rd Test against Australia at the SCG.
— BCCI (@BCCI) January 6, 2021 " class="align-text-top noRightClick twitterSection" data="
Navdeep Saini is all set to make his debut.#AUSvIND pic.twitter.com/lCZNGda8UD
">NEWS - #TeamIndia announce Playing XI for the 3rd Test against Australia at the SCG.
— BCCI (@BCCI) January 6, 2021
Navdeep Saini is all set to make his debut.#AUSvIND pic.twitter.com/lCZNGda8UDNEWS - #TeamIndia announce Playing XI for the 3rd Test against Australia at the SCG.
— BCCI (@BCCI) January 6, 2021
Navdeep Saini is all set to make his debut.#AUSvIND pic.twitter.com/lCZNGda8UD
ಭಾರತದ ಇಲೆವೆನ್: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ನವದೀಪ್ ಸೈನಿ, ರವೀಂದ್ರ ಜಡೇಜಾ, ಆರ್. ಅಶ್ವಿನ್ ಮತ್ತು ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ವಿರುದ್ಧ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ರೋಹಿತ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಪಿತೃತ್ವ ರಜೆಯಲ್ಲಿರುವ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ.