ಮುಂಬೈ: ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದ ವಿಕೆಟ್ ಕೀಪರ್ ರಿಷಭ್ ಪಂತ್ ಮೇಲೆ ವೈದ್ಯರು ನಿಗಾ ಇರಿಸಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಮಂಗಳವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್ 28 ರನ್ ಗಳಿಸಿದ್ದ ವೇಳೆ ಆಸೀಸ್ ವೇಗಿ ಕಮ್ಮಿನ್ಸ್ ಬೌಲಿಂಗ್ನಲ್ಲಿ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು. ಈ ವೇಳೆ ಆಸ್ಟ್ರೇಲಿಯಾ ಬೌಲರ್ ಎಸೆದ ಚೆಂಡು ರಿಷಬ್ ಬ್ಯಾಟ್ಗೆ ತಾಗಿದ ನಂತರ ಹೆಲ್ಮೆಟ್ಗೆ ಬಡಿದ ಕಾರಣ ಅವರು ಅರೆಪ್ರಜ್ಞಾವಸ್ಥೆ ತಲುಪಿದ್ದರು. ಹೀಗಾಗಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನ ಕೆ.ಎಲ್.ರಾಹುಲ್ ನಿರ್ವಹಿಸಿದ್ದರು.
- ' class='align-text-top noRightClick twitterSection' data=''>
ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ. ರಿಷಭ್ ಪಂತ್ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ. ರಾತ್ರಿಯಿಡೀ ಅವರ ಆರೋಗ್ಯ ಸ್ಥಿತಿ ಬಗ್ಗೆ ಗಮನ ಹರಿಸಲಾಗಿತ್ತು. ನುರಿತ ವೈದ್ಯರ ತಂಡ ಪಂತ್ರನ್ನ ಭೇಟಿ ಮಾಡಿದ್ದು, ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದೆ.
ಮಂಗಳವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾವನ್ನ ಸೋಲಿಸದ ಆಸೀಸ್ ತಂಡ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.