ETV Bharat / sports

ಸ್ಟೊಯ್ನಿಸ್​ಗೆ ಗಾಯ: ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ

author img

By

Published : Nov 28, 2020, 12:24 PM IST

ಮೊದಲ ಏಕದಿನ ಪಂದ್ಯದಲ್ಲಿ ಗಾಯಗೊಂಡ ಆಸ್ಟ್ರೇಲಿಯಾ ಆಲ್‌ರೌಂಡರ್ ಮಾರ್ಕಸ್ ಸ್ಟೊಯ್ನಿಸ್ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನವಾಗಿದೆ.

Stoinis doubtful for 2nd ODI after picking side injury
ಮಾರ್ಕಸ್​ ಸ್ಟೊಯ್ನಿಸ್​ಗೆ ಗಾಯ

ಸಿಡ್ನಿ (ಆಸ್ಟ್ರೇಲಿಯಾ): ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಗಾಯಗೊಂಡ ಆಸ್ಟ್ರೇಲಿಯಾ ಆಲ್‌ರೌಂಡರ್ ಮಾರ್ಕಸ್ ಸ್ಟೊಯ್ನಿಸ್ ಅವರು ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನವಾಗಿದೆ.

ಮೊದಲ ಏಕದಿನ ಪಂದ್ಯದಲ್ಲಿ ತನ್ನ ಏಳನೇ ಓವರ್​ನ ಬೌಲಿಂಗ್ ವೇಳೆ ಎರಡು ಎಸೆತ ಎಸೆದ ಸ್ಟೊಯ್ನಿಸ್ ಗಾಯದ ಕಾರಣದಿಂದಾಗಿ ಮೈದಾನ ತೊರೆದರು. ಇದೀಗ ದ್ವಿತೀಯ ಏಕದಿನ ಪಂದ್ಯದಲ್ಲಿ ಸ್ಟೊಯ್ನಿಸ್ ಕಣಕ್ಕಿಳಿಯುವುದು ಅನುಮಾನ ಎಂದು ವರದಿಯಾಗಿದೆ.

ವೆಸ್ಟರ್ನ್ ಆಸ್ಟ್ರೇಲಿಯಾದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್, ಸ್ಟೊಯಿನಿಸ್‌ಗೆ ಬದಲಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಗ್ರೀನ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಭಾರತ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು.

ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್​ನಲ್ಲಿ ಸರ್ವತೋಮುಖ ಪ್ರದರ್ಶನದ ನೀಡಿದ ಆಸ್ಟ್ರೇಲಿಯಾ 66 ರನ್‌ಗಳಿಂದ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

-

ETV Bharat Logo

Copyright © 2024 Ushodaya Enterprises Pvt. Ltd., All Rights Reserved.