ETV Bharat / sports

ಭಾರತದ ಮುಡಿಗೆ ಗೆಲುವಿನ 'ಗುಲಾಬಿ': ಬಾಂಗ್ಲಾ ವಿರುದ್ಧ ಟೆಸ್ಟ್‌ ಸರಣಿ ಗೆದ್ದ ಕೊಹ್ಲಿ ಟೀಂ

author img

By

Published : Nov 24, 2019, 2:55 PM IST

ಬಾಂಗ್ಲಾ ವಿರುದ್ಧದ ಮೊದಲ ಹಗಲು-ರಾತ್ರಿ ಟೆಸ್ಟ್​ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಟೆಸ್ಟ್​ ಸರಣಿಯನ್ನ ಕ್ಲೀನ್​ಸ್ವಿಪ್ ಮಾಡಿದೆ.

ಸರಣಿ ಗೆದ್ದ ಟೀಂ ಇಂಡಿಯಾ

ಕೋಲ್ಕತ್ತಾ: ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 46 ರನ್​ಗಳಿಂದ ಜಯ ದಾಖಲಿಸಿದ್ದು, ಎರಡು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಜಯಭೇರಿ ಬಾರಿಸಿದೆ.

ಎರಡನೇ ದಿನದಾಟದ ಅಂತ್ಯಕ್ಕೆ 33.3 ಓವರ್​ಗಳಲ್ಲಿ 152 ರನ್​ ಗಳಿಗೆ 6 ವಿಕೆಟ್​ ಕಳೆದುಕೊಂಡಿದ್ದ ಬಾಂಗ್ಲಾ ತಂಡ ಮೂರನೇ ದಿನ ಬ್ಯಾಟಿಂಗ್ ಆರಂಭಿಸಿತು. ದಿನದಾಟದ ಆರಂಭದಲ್ಲೇ ಶಾಕ್ ನೀಡಿದ ಉಮೇಶ್ ಯಾದವ್, ಇಬಾದತ್​ಗೆ ಪೆವಿಲಿಯನ್ ದಾರಿ ತೋರಿಸಿದ್ರು.

ಒಂದೆಡೆ ವಿಕೆಟ್ ಬೀಳುತ್ತಿದ್ರೂ ಉತ್ತಮವಾಗಿ ಬ್ಯಾಟ್ ಬೀಸುತಿದ್ದ ಮುಷ್ಫೀಕರ್ ರಹೀಮ್ ಆಕರ್ಷಕ ಅರ್ಧ ಶತಕ ಸಿಡಿಸಿ ಭರವಸೆ ಮೂಡಿಸಿದ್ರು. ಆದ್ರೆ ತಂಡ 74 ರನ್ ​ಗಳಿಸಿರುವಾಗ ಉಮೇಶ್ ಯಾದವ್​ ಎಸೆತದಲ್ಲಿ ಜಡೇಜಾಗೆ ಕ್ಯಾಚ್​ ನೀಡಿ ನಿರ್ಗಮಿಸಿದ್ರು. ಅಂತಿಮವಾಗಿ ಬಾಂಗ್ಲಾ ತಂಡ 41.1 ಓವರ್​ಗಳಲ್ಲಿ 195ರನ್​ಗಳಿಗೆ ಸರ್ವಪತನ ಕಂಡು ಇನ್ನಿಂಗ್ಸ್ ಮತ್ತು 46 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಭಾರತದ ಪರ ಉತ್ತಮ ಬೌಲಿಂಗ್​ ಪ್ರದರ್ಶನ ತೋರಿದ ಉಮೇಶ್​ ಯಾದವ್ 5 ವಿಕೆಟ್​ ಪಡೆದು ಮಿಂಚಿದ್ರೆ, ಇಶಾಂತ್ ಶರ್ಮಾ 4 ವಿಕೆಟ್ ಕಬಳಿಸಿದ್ರು.

ಟೆಸ್ಟ್​​ ಸರಣಿ ಮತ್ತು ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ವೇಗಿ ಇಶಾಂತ್ ಶರ್ಮಾ ಪಂದ್ಯ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.