ಹೈದರಾಬಾದ್: 2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ನ ರೌಂಡ್ ರಾಬಿನ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲು ಕಂಡಿದ್ದು, ಉದ್ದೇಶಪೂರ್ವಕ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟರ್ ಅಬ್ದುಲ್ ರಜಾಕ್ ಆರೋಪ ಮಾಡಿದ್ದಾರೆ.
ಪಾಕಿಸ್ತಾನದ ಸುದ್ದಿ ವಾಹಿನಿವೊಂದರಲ್ಲಿ ಮಾತನಾಡಿದ ರಜಾಕ್, ನಾವು ಅದು ಪಂದ್ಯವನ್ನ ವೀಕ್ಷಣೆ ಮಾಡುತ್ತಿದ್ದೇವು. ತಂಡ ಉದ್ದೇಶಪೂರ್ವಕವಾಗಇ ಸೋಲು ಕಂಡರೆ ಶಿಕ್ಷೆಯಾಗಬೇಕು ಎಂದು ನಾನು ಐಸಿಸಿ ಬಳಿ ಮನವಿ ಕೂಡ ಮಾಡಿಕೊಂಡಿದ್ದೇನೆ ಎಂದಿದ್ದಾರೆ.
ಭಾರತದ ಬ್ಯಾಟ್ಸ್ಮನ್ ಸುಲಭವಾಗಿ ಸಿಕ್ಸರ್ ಸಿಡಿಸಬಹುದಾಗಿತ್ತು. ಆದರೆ ಅವರು 1ರನ್ ತೆಗೆದುಕೊಳ್ಳುವಲ್ಲಿ ನಿರತರಾಗಿದ್ದರು. ಕೊಹ್ಲಿ, ರೋಹಿತ್ ಶರ್ಮಾ ನಡೆ ಕೂಡ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು ಎಂದು ಅವರು ತಿಳಿಸಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಮಾತನಾಡಿದ್ದ ಇಂಗ್ಲೆಂಡ್ ತಂಡದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಕೂಡ ಅದು ಭಾರತ ನಮ್ಮ ವಿರುದ್ಧ ಸುಲಭವಾಗಿ ಗೆಲುವು ಸಾಧಿಸಬಹುದಾಗಿತ್ತು ಎಂದು ಹೇಳಿದ್ದರು.
ಅಂದಿನ ಪಂದ್ಯದಲ್ಲಿ ಭಾರತ ಗೆಲುವು ದಾಖಲು ಮಾಡಿದ್ದರೆ, ಪಾಕ್ ಮುಂದಿನ ಹಂತಕ್ಕೆ ಪ್ರವೇಶ ಪಡೆದುಕೊಳ್ಳಬಹುದಾಗಿತ್ತು. ಇನ್ನು ಸೆಮಿಫೈನಲ್ನಲ್ಲಿ ಭಾರತ ಕೂಡ ನ್ಯೂಜಿಲ್ಯಾಂಡ್ ವಿರುದ್ಧ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು.