ETV Bharat / sports

ಎಲ್ಲಾ 3 ಮಾದರಿ ಕ್ರಿಕೆಟ್​ ಟೂರ್ನಿಗಳಲ್ಲಿ ಫೈನಲ್ ತಲುಪಿದ ಏಕೈಕ ತಂಡ ಭಾರತ - ಎಲ್ಲಾ ಐಸಿಸಿ ಪಂದ್ಯಾವಳಿಗಳ ಫೈನಲ್​ ಆಡಲಿರುವ ಮೊದಲ ತಂಡ ಭಾರತ

ಐಸಿಸಿ ಮೊದಲ ಬಾರಿಗೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಪರಿಚಯಿಸಿದೆ. ಮೊದಲ ಟ್ರೋಫಿಯನ್ನು ಎತ್ತಿ ಹಿಡಿಯಲು ನ್ಯೂಜಿಲೆಂಡ್​ ಮತ್ತು ಭಾರತ ತಂಡಗಳ ನಡುವೆ ಸ್ಪರ್ಧೆ ನಡೆಯಲಿದೆ. ವಿಶೇಷವೆಂದರೆ ಭಾರತ ತಂಡ ಐಸಿಸಿಯ ಎಲ್ಲಾ ಮಾದರಿಯ ಕ್ರಿಕೆಟ್​ಗಳ ವಿಶ್ವಕಪ್​ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​
ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​
author img

By

Published : Mar 6, 2021, 10:52 PM IST

ಅಹ್ಮದಾಬಾದ್​: ಇಂಗ್ಲೆಂಡ್ ವಿರುದ್ಧ ಭಾರತ ತಂಡ 3-1ರಲ್ಲಿ ಟೆಸ್ಟ್​ ಸರಣಿಯನ್ನು ಗೆಲ್ಲುವ ಮೂಲಕ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಪ್ರವೇಶಿಸಿದೆ. ಜೂನ್​ ತಿಂಗಳಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಟ್ರೋಫಿಗಾಗಿ ಹೋರಾಡಲಿದೆ.

ಐಸಿಸಿ ಮೊದಲ ಬಾರಿಗೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಪರಿಚಯಿಸಿದೆ. ಮೊದಲ ಟ್ರೋಫಿಯನ್ನು ಎತ್ತಿ ಹಿಡಿಯಲು ನ್ಯೂಜಿಲೆಂಡ್ ಮತ್ತು ಭಾರತ ತಂಡಗಳ ನಡುವೆ ಸ್ಪರ್ಧೆ ನಡೆಯಲಿದೆ. ವಿಶೇಷವೆಂದರೆ ಭಾರತ ತಂಡ ಐಸಿಸಿಯ ಎಲ್ಲಾ ಮಾದರಿಯ ಕ್ರಿಕೆಟ್​ಗಳ ವಿಶ್ವಕಪ್​ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಭಾರತ ತಂಡ 1983, 2003 ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಫೈನಲ್​ ಪ್ರವೇಶಿಸಿತ್ತು. ಅದರಲ್ಲಿ 1983 ಮತ್ತು 2011ರಲ್ಲಿ ಚಾಂಪಿಯನ್ ಆಗಿದೆ. 2007ರಲ್ಲಿ ಟಿ20 ವಿಶ್ವಕಪ್​ ಫೈನಲ್ ಪ್ರವೇಶಿಸಿ ಚಾಂಪಿಯನ್ ಆಗಿದೆ. ಇದೀಗ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲೂ ಫೈನಲ್ ಪ್ರವೇಶಿಸಿದೆ.

ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ಪ್ರವೇಶಿಸಿರುವ ನ್ಯೂಜಿಲೆಂಡ್ ಇದುವರೆಗೂ 2 ಬಾರಿ ಏಕದಿನ ವಿಶ್ವಕಪ್​ ಫೈನಲ್ ತಲುಪಿದೆ. ಆದರೆ ಟಿ20 ಕ್ರಿಕೆಟ್​ನಲ್ಲಿ ಇನ್ನೂ ಒಮ್ಮೆಯೂ ಫೈನಲ್ ಪ್ರವೇಶಿಸಿಲ್ಲ. ಹೀಗಾಗಿ ಟೀಂ ಇಂಡಿಯಾ ಎಲ್ಲಾ ಮಾದರಿಯ ಐಸಿಸಿ ವಿಶ್ವಕಪ್​ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನು ಓದಿ:4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಹೆಚ್ಚು ಬಾರಿ 30 ವಿಕೆಟ್​: ವಿಶ್ವದಾಖಲೆ ನಿರ್ಮಿಸಿದ ಆರ್​. ಅಶ್ವಿನ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.