ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2ರಿಂದ ಆರಂಭಗೊಳ್ಳಲಿರುವ ಮೂರು ಟೆಸ್ಟ್ ಪಂದ್ಯಗಳ ಸರಣಿಗಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಕನ್ನಡಿಗ ಕೆಎಲ್ ರಾಹುಲ್ಗೆ ಕೊಕ್ ನೀಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕೆಎಲ್ ರಾಹುಲ್ಗೆ ಕೈಬಿಡಲಾಗಿದ್ದು, ಮತ್ತೋರ್ವ ಕನ್ನಡಿಗ ಮಯಾಂಕ್ ಅಗರವಾಲ್ ಅವಕಾಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದಂತೆ 15 ಸದಸ್ಯರ ಬಳಗದಲ್ಲಿ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಚಾನ್ಸ್ ಪಡೆದುಕೊಂಡಿದ್ದಾರೆ. ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ಕೆ ಪ್ರಸಾದ್ ನೇತೃತ್ವದ ಸಮಿತಿ 15 ಸದಸ್ಯರ ತಂಡ ಪ್ರಕಟಗೊಳಿಸಿದ್ದು, ತಂಡ ಇಂತಿದೆ.
ತಂಡ ಇಂತಿದೆ: ವಿರಾಟ್ ಕೊಹ್ಲಿ(ಕ್ಯಾಪ್ಟನ್) ಮಯಾಂಕ್ ಅಗರವಾಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ವಿ.ಕೀ),ವೃದ್ಧಿಮಾನ್ ಸಾಹಾ(ವಿ.ಕೀ),ಆರ್ ಅಶ್ವಿನ್,ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ ಹಾಗೂ ಶುಬ್ಮನ್ ಗಿಲ್.
ವೆಸ್ಟ್ ಇಂಡೀಸ್ ವಿರುದ್ಧ ಅದ್ಭುತ ಪ್ರದರ್ಶನ ತೋರಿದ್ದ ರಹಾನೆ ಹಾಗೂ ವಿಹಾರಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುವುದು ಫಿಕ್ಸ್ ಆಗಿರುವ ಕಾರಣ, ರೋಹಿತ್ ಶರ್ಮಾ ಕನ್ನಡಿಗ ಅಗರವಾಲ್ ಜತೆ ಸೇರಿ ಟೆಸ್ಟ್ನಲ್ಲಿ ಆರಂಭಿಕವಾಗಿ ಬ್ಯಾಟ್ ಬೀಸಲಿದ್ದಾರೆ.