ನವದೆಹಲಿ: ಆಸ್ಟ್ರೇಲಿಯಾ ಅಂಗಳದಲ್ಲಿ ಟೀಂ ಇಂಡಿಯಾ ಇದೇ ವರ್ಷದ ಅಂತ್ಯದ ವೇಳೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಅದಕ್ಕಾಗಿ 26 ಸದಸ್ಯರನ್ನೊಳಗೊಂಡ ತಂಡ ಪ್ರಕಟಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಇದೇ ವಿಷಯವಾಗಿ ಆಯ್ಕೆ ಸಮಿತಿ ಮಾಜಿ ಅಧ್ಯಕ್ಷ ಎಂಎಸ್ಕೆ ಪ್ರಸಾದ್ ಮಾತನಾಡಿದ್ದು, 26 ಸದಸ್ಯರನ್ನೊಳಗೊಂಡ ತಂಡ ಪ್ರಕಟ ಮಾಡುವುದು ನನ್ನ ಪ್ರಕಾರ ಉತ್ತಮ ಎಂದು ಹೇಳಿದ್ದಾರೆ. ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ 14 ದಿನಗಳ ಕಾಲ ಕ್ವಾರಂಟೈನ್ಗೊಳಗಾಗುವ ಸಾಧ್ಯತೆ ದಟ್ಟವಾಗಿದ್ದು, ಹೀಗಾಗಿ ಈಗಾಗಲೇ ವೆಸ್ಟ್ ಇಂಡೀಸ್, ಪಾಕಿಸ್ತಾನ ತಂಡಗಳು ಘೋಷಣೆ ಮಾಡಿರುವ ರೀತಿಯಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.
ಇಂಗ್ಲೆಂಡ್ ಪ್ರವಾಸ ಬೆಳೆಸಿರುವ ಪಾಕಿಸ್ತಾನ ತಂಡ ಈಗಾಗಲೇ 29 ಸದಸ್ಯರ ತಂಡ ಘೋಷಣೆ ಮಾಡಿದ್ದು, ವೆಸ್ಟ್ ಇಂಡೀಸ್ ಕೂಡ 26 ಸದ್ಯಸರನ್ನ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಗಾಗಿ ಘೋಷಣೆ ಮಾಡಿತು. ಆಯ್ಕೆ ಸಮಿತಿ 26 ಸದಸ್ಯರ ತಂಡ ಘೋಷಣೆ ಮಾಡಿದರೆ ನೆಟ್ ಪ್ರ್ಯಾಕ್ಟಿಸ್ ವೇಳೆ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ ಹಾಗೂ ಉಮೇಶ್ ಯಾದವ್ಗೆ ಹೆಚ್ಚಿನ ಒತ್ತಡ ಬೀಳುವುದಿಲ್ಲ ಎಂದು ತಿಳಿಸಿದ್ದಾರೆ.
ಯಾರೆಲ್ಲ ಆಯ್ಕೆಯಾಗುವ ಸಾಧ್ಯತೆ!?
ರೋಹಿತ್ ಶರ್ಮಾ, ಮಯಾಂಕ್ ಅಗರವಾಲ್, ಪೃಥ್ವಿ ಶಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ(ಕ್ಯಾಪ್ಟನ್) ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ಶುಭಮನ್ ಗಿಲ್,ಶ್ರೇಯಸ್ ಅಯ್ಯರ್, ರಿಷಬ್ ಪಂತ್, ವೃದ್ಧಿಮಾನ್ ಸಾಹಾ, ಆರ್.ಅಶ್ವಿನ್, ರವೀಂದ್ರ ಜಡೇಜಾ, ನದೀಮ್, ರಾಹುಲ್ ಚಹರ್, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮ್ಮಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ನವದೀಪ್ ಸೈನಿ, ಖಲೀಲ್ ಅಹ್ಮದ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಯಜುವೇಂದ್ರ ಚಹಲ್, ಕೃನಾಲ್ ಪಾಂಡ್ಯ