ETV Bharat / sports

ಭಾರತ-ಆಸೀಸ್ ಏಕದಿನ ಸರಣಿ : ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಆಸ್ಟ್ರೇಲಿಯಾ

author img

By

Published : Nov 29, 2020, 8:53 AM IST

ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ಇಂದು ಎರಡನೇ ಪಂದ್ಯ ಆರಂಭವಾಗಿದ್ದು, ಆಸ್ಟ್ರೇಲಿಯಾ ತಂಡ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲನೇ ಮ್ಯಾಚ್​ ಗೆದ್ದಿರುವ ಆ್ಯರೋನ್ ಫಿಂಚ್ ಪಡೆ ಎರಡನೇ ಪಂದ್ಯ ಗೆದ್ದು ಸರಣಿ ಕೈ ವಶ ಮಾಡಿಕೊಳ್ಳುವ ತವಕದಲ್ಲಿದೆ.

india-vs-australia-2nd-odi
ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದು ಕೊಂಡ ಆಸ್ಟ್ರೇಲಿಯಾ

ಹೈದರಾಬಾದ್ : ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಇಂದು ಎರಡನೇ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿಂದು ಎರಡನೇ ಪಂದ್ಯ ಆರಂಭವಾಗಿದ್ದು, ಟಾಸ್​ ಗೆದ್ದು ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲನೇ ಮ್ಯಾಚ್​ ಗೆದ್ದಿರುವ ಆ್ಯರೋನ್ ಫಿಂಚ್ ಪಡೆ ಎರಡನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

ಮೂರು ಪಂದ್ಯಗಳ ಏಕದಿನ ಸರಣಿ ಜೀವಂತವಾಗಿರಿಸಿಕೊಳ್ಳಬೇಕಾದರೆ ಭಾರತಕ್ಕೆ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 374 ರನ್ ಗಳ ಬೃಹತ್ ಟಾರ್ಗೆಟ್​ ನೀಡಿತ್ತು. ಈ ಟಾರ್ಗೆಟ್​ ಬೆನ್ನತ್ತಿದ್ದ ಟೀಂ ಇಂಡಿಯಾ ಕೇವಲ 308 ರನ್​ಗಳಿಸುವ ಮೂಲಕ 66 ರನ್ ಗಳ ಹಿನಾಯ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಸ್ಟೀವನ್ ಸ್ಮಿತ್ ಮತ್ತು ನಾಯಕ ಆ್ಯರೋನ್ ಫಿಂಚ್ ತಲಾ ಶತಕ ಸಿಡಿಸಿ ಆತಿಥೇಯರ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಶ್ರೇಯಸ್ ಐಯ್ಯರ್, ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್( ವಿ.ಕೀ. ಮತ್ತು ಉ.ನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್​.

ಆಸ್ಟ್ರೇಲಿಯಾ ತಂಡ: ಆ್ಯರೋನ್ ಫಿಂಚ್(ನಾಯಕ), ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್(ಉಪನಾಯಕ), ಜೋಶ್ ಹೇಜಲ್‌ವುಡ್, ಮೊಯಿಸ್ ಹೆನ್ರಿಕೇಸ್, ಮಾರ್ನಸ್​ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್​, ಡೇವಿಡ್ ವಾರ್ನರ್, ಆ್ಯಡಂ ಜಂಪಾ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.