ETV Bharat / sports

ಕಾಂಗರೂಗಳಿಗೆ ಶಾಕ್ ನೀಡಿದ ಟೀಂ ಇಂಡಿಯಾ ​: 182 ರನ್ ಮುನ್ನಡೆಯಲ್ಲಿ ಆಸ್ಟ್ರೇಲಿಯಾ - ಗಬ್ಬಾ ಟೆಸ್ಟ್ ಪಂದ್ಯ

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ ತಂಡ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದ್ದು, ಒಟ್ಟಾರೆ 182 ರನ್​ಗಳ ಮುನ್ನಡೆ ಸಾಧಿಸಿದೆ. ಸ್ಟೀವ್ ಸ್ಮಿತ್ 28 ಮತ್ತು ಗ್ರೀನ್ 4 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದ್ದಾರೆ.

India vs Australia 4th Test
182 ರನ್ ಮುನ್ನಡೆಯಲ್ಲಿ ಆಸ್ಟ್ರೇಲಿಯಾ
author img

By

Published : Jan 18, 2021, 7:54 AM IST

ಬ್ರಿಸ್ಬೇನ್: ಬಾರ್ಡ್ - ಗವಾಸ್ಕರ್ ಸರಣಿಯ ಅಂತಿಮ ಟೆಸ್ಟ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದ್ದು, ದ್ವಿತೀಯ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಬೌಲರ್​ಗಳ ದಾಳಿಗೆ ಕುಸಿತಕಂಡ ಆಸೀಸ್ 4 ವಿಕೆಟ್ ಕಳೆದುಕೊಂಡು 144 ರನ್ ಗಳಿಸಿದೆ.

ಮೂರನೇ ದಿನದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ 6 ಓವರ್​ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 21 ರನ್ ಗಳಿಸಿತ್ತು. ನಾಲ್ಕನೇ ದಿನ ಇನ್ನಿಂಗ್ಸ್ ಆರಂಭಿಸಿದ ವಾರ್ನರ್ ಮತ್ತು ಮಾರ್ಕಸ್ ಹ್ಯಾರಿಸ್ ಭಾರ್ಜರಿಯಾಗಿ ಬ್ಯಾಟ್ ಬೀಸಿದ್ರು.

ಆರಂಭದಿಂದಲೂ ಉತ್ತಮವಾಗಿ ಬ್ಯಾಟ್ ಬೀಸಿದ ಈ ಜೋಡಿ ಡೊಡ್ಡ ಮೊತ್ತ ಕಲೆಹಾಕುವ ಸೂಚನೆ ನೀಡಿತ್ತು. ಆದರೆ, ಟೀಂ ಇಂಡಿಯಾ ವೇಗಿ ಶರ್ದೂಲ್ ಠಾಕೂರ್ ಮಾರ್ಕಸ್ ಹ್ಯಾರಿಸ್(38) ವಿಕೆಟ್ ಪಡೆಯುವ ಮೂಲಕ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾದ್ರು.

ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದ ಡೇವಿಡ್ ವಾರ್ನರ್ 48 ರನ್ ಗಳಿಸಿ ಸುಂದರ್ ಬೌಲಿಂಗ್​ನಲ್ಲಿ ಎಲ್​ಬಿ ಬಲೆಗೆ ಬಿದ್ದು ಪಎವಿಲಿಯನ್ ಸೇರಿದ್ರು. ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಸಿಡಿಸಿದ್ದ ಮಾರ್ಕಸ್ ಲಾಬುಶೇನ್ ಬೌಂಡರಿಗಳ ಮೂಲಕ ಸ್ಫೋಟಕ ಆಟವಾಡಿ 25 ರನ್​ಗಳಿಸಿ ಸಿರಾಜ್ ಎಸೆತದಲ್ಲಿ ರೋಹಿತ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ರು. ಅದೇ ಓವರ್​ನಲ್ಲಿ ಮ್ಯಾಥ್ಯೂ ವೇಡ್ ವಿಕೆಟ್ ಪಡೆದ ಸಿರಾಜ್ ಟೀಂ ಇಂಡಿಯಾಕ್ಕೆ ಮೇಲುಗೈ ತಂದುಕೊಟ್ರು.

ಒಂದು ಹಂತದಲ್ಲಿ ಬಿಗ್​ ಸ್ಕೋರ್ ಕಲೆಹಾಕುವ ಸೂಚನೆ ನೀಡಿದ್ದ ಆಸೀಸ್ ಕೆಲ ಓವರ್​ಗಳಲ್ಲೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ ತಂಡ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದ್ದು ಒಟ್ಟಾರೆ 182 ರನ್​ಗಳ ಮುನ್ನಡೆ ಸಾಧಿಸಿದೆ. ಸ್ಟೀವ್ ಸ್ಮಿತ್ 28 ಮತ್ತು ಗ್ರೀನ್ 4 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.