ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾ ನಡುವಿನ ಅಹರ್ನಿಶಿ ಟೆಸ್ಟ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ದುಕೊಂಡಿದೆ.
-
Bangladesh have won the toss and will bat first in the #PinkBallTest @Paytm #INDvBAN pic.twitter.com/LCTkWZ6bKM
— BCCI (@BCCI) November 22, 2019 " class="align-text-top noRightClick twitterSection" data="
">Bangladesh have won the toss and will bat first in the #PinkBallTest @Paytm #INDvBAN pic.twitter.com/LCTkWZ6bKM
— BCCI (@BCCI) November 22, 2019Bangladesh have won the toss and will bat first in the #PinkBallTest @Paytm #INDvBAN pic.twitter.com/LCTkWZ6bKM
— BCCI (@BCCI) November 22, 2019
ಈಗಾಗಲೇ ಇಂದೋರ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಗಳಿಸಿದ್ದು, ಇಂದಿನ ಪಂದ್ಯದಲ್ಲಿ ಕೂಡ ಉತ್ತಮ ಪ್ರದರ್ಶನ ನೀಡುವ ಮೂಲಕ ಸರಣಿ ಗೆಲ್ಲುವ ತವಕದಲ್ಲಿದೆ. ಉಭಯ ತಂಡಗಳಿಗೂ ಇದು ಮೊದಲನೇ ಅಹರ್ನಿಶಿ ಟೆಸ್ಟ್ ಪಂದ್ಯವಾಗಿದ್ದು, ಈಗಾಗಲೇ ನೆಟ್ನಲ್ಲಿ ಸಾಕಷ್ಟು ಬೆವರು ಹರಿಸಿದ್ದಾರೆ.
ಟೀಂ ಇಂಡಿಯಾದ ಹಲವು ಆಟಗಾರರು ದೇಶಿ ಟೂರ್ನಿಯಲ್ಲಿ ಅಹರ್ನಿಶಿ ಟೆಸ್ಟ್ ಪಂದ್ಯ ಆಡಿರುವ ಅಭ್ಯಾಸವಿರುವುದರಿಂದ ಉತ್ತಮ ಪ್ರದರ್ಶನ ನೀಡುವ ಆತ್ಮವಿಶ್ವಾಸದಲ್ಲಿದ್ದಾರೆ.
ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಿದ್ದಾರೆ. ಪಂದ್ಯದ ಆರಂಭಕ್ಕೂ ಮೊದಲು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಉಭಯ ತಂಡದ ಆಟಗಾರರ ಕೈ ಕುಲುಕಿ ಅಭಿನಂದಿಸಿದರು.
-
Her Excellency Sheikh Hasina, Prime Minister of Bangladesh, @MamataOfficial, Honourable Chief Minister, West Bengal and #TeamIndia great @sachin_rt greet #TeamIndia ahead of the #PinkballTest pic.twitter.com/ldyrKjbxrE
— BCCI (@BCCI) November 22, 2019 " class="align-text-top noRightClick twitterSection" data="
">Her Excellency Sheikh Hasina, Prime Minister of Bangladesh, @MamataOfficial, Honourable Chief Minister, West Bengal and #TeamIndia great @sachin_rt greet #TeamIndia ahead of the #PinkballTest pic.twitter.com/ldyrKjbxrE
— BCCI (@BCCI) November 22, 2019Her Excellency Sheikh Hasina, Prime Minister of Bangladesh, @MamataOfficial, Honourable Chief Minister, West Bengal and #TeamIndia great @sachin_rt greet #TeamIndia ahead of the #PinkballTest pic.twitter.com/ldyrKjbxrE
— BCCI (@BCCI) November 22, 2019
ತಂಡಗಳು
ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ರವೀಂದ್ರ ಜಡೇಜಾ, ವೃದ್ಧಿಮಾನ್ ಸಹಾ (ವಿಕೆಟ್‌ಕೀಪರ್), ಆರ್. ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ.
ಬಾಂಗ್ಲಾದೇಶ: ಮೊಮಿನುಲ್ ಹಕ್ (ನಾಯಕ), ಶಾದಮನ್ ಇಸ್ಲಾಂ, ಇಮ್ರುಲ್ ಕಯಸ್, ಮುಷ್ಫಿಕುರ್ ರಹೀಮ್, ಮಹಮುದುಲ್ಲಾ, ಮೊಹಮ್ಮದ್ ಮಿಥುನ್, ಲಿಟನ್ ದಾಸ್ (ವಿಕೆಟ್‌ಕೀಪರ್), ಮಹದಿ ಹಸನ್, ಅಬು ಜಯದ್, ಇಬಾದತ್ ಹುಸೇನ್, ಅಲ್ ಅಮಿನ್ ಹುಸೇನ್.