ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ಹಾಗೂ ಭಾರತದ ನಡುವಿನ ಮೂರನೇ ಟಿ-20 ಪಂದ್ಯ ಆರಂಭಗೊಂಡಿದ್ದು, ಟಾಸ್ ಗೆದ್ದ ಆಂಗ್ಲರ ಪಡೆ ಬೌಲಿಂಗ್ ಆಯ್ದುಕೊಂಡಿದೆ.
ಗುಜರಾತ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಕೊರೊನಾ ವೈರಸ್ ಕಾರಣ ಕ್ರೀಡಾಭಿಮಾನಿಗಳಿಗೆ ಪಂದ್ಯ ವೀಕ್ಷಣೆ ಮಾಡಲು ಅವಕಾಶ ನೀಡಿಲ್ಲ. ಐದು ಟಿ-20 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಉಭಯ ತಂಡಗಳು ತಲಾ 1-1ರಲ್ಲಿ ಗೆಲುವು ದಾಖಲು ಮಾಡಿ ಸರಣಿ ಸಮಬಲ ಮಾಡಿಕೊಂಡಿವೆ. ಟೂರ್ನಿಯಲ್ಲಿ ಮುನ್ನಡೆ ಪಡೆದುಕೊಳ್ಳುವ ಉದ್ದೇಶದಿಂದ ಇಂದಿನ ಪಂದ್ಯ ಉಭಯ ತಂಡಗಳಿಗೆ ಮಹತ್ವದಾಗಿದೆ. ತಂಡಕ್ಕೆ ರೋಹಿತ್ ಶರ್ಮಾ ಕಮ್ಬ್ಯಾಕ್ ಮಾಡಿರುವ ಕಾರಣ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಸಾಧ್ಯತೆ ಇದೆ.
ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ತಂಡ ಆಡುವ 11ರ ಬಳಗದಲ್ಲಿ ಒಂದು ಬದಲಾವಣೆ ಮಾಡಿದ್ದು, ಸೂರ್ಯಕುಮಾರ್ ಯಾದವ್ ಬದಲಿಗೆ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾಗೆ ಅವಕಾಶ ನೀಡಿದೆ.
ಇಂಗ್ಲೆಂಡ್ ತಂಡ ಟಾಮ್ ಕರ್ರನ್ ಬದಲಿಗೆ ಮಾರ್ಕ್ ವುಡ್ಗೆ ಅವಕಾಶ ನೀಡಿದೆ.
ಆಡುವ 11ರ ಬಳಗ ಇಂತಿದೆ
ಟೀಂ ಇಂಡಿಯಾ: ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆ.ಎಲ್ ರಾಹುಲ್,ವಿರಾಟ್ ಕೊಹ್ಲಿ(ಕ್ಯಾಪ್ಟನ್), ರಿಷಭ್ ಪಂತ್, ಶ್ರೇಯಸ್ ಅಯ್ಯರ್,ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್
ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್(ಕ್ಯಾಪ್ಟನ್), ಡೇವಿಡ್ ಮಲನ್, ಬೈರ್ಸ್ಟೋವ್, ಇಯಾನ್ ಮಾರ್ಗನ್(ಕ್ಯಾಪ್ಟನ್), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡನ್, ಜೋಪ್ರಾ ಆರ್ಚರ್, ರಶೀದ್ ಹಾಗು ಮಾರ್ಕ್ ವುಡ್