ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಕ್ರಿಕೆಟ್ ಸರಣಿ ಬಳಿಕ ಭಾರತದಲ್ಲೇ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಡೆಯಲಿರುವ ಕ್ರಿಕೆಟ್ ಸರಣಿಯ ಟಿ-20ಯಲ್ಲಿ ಮಹೇಂದ್ರ ಸಿಂಗ್ ಧೋನಿ ಆಡುವ ಸಾಧ್ಯತೆ ಕಡಿಮೆ ಇದೆ ಎಂಬ ಮಾತು ಕೇಳಿ ಬರುತ್ತಿವೆ.
ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯಾಗಿ ಸೆಪ್ಟೆಂಬರ್ 4ರಂದು ತಂಡ ಆಯ್ಕೆಗೊಳ್ಳಲಿದೆ. ಇಲ್ಲಿ ಧೋನಿ ಬದಲಿತೆ ಉದಯೋನ್ಮುಖ ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಭ್ ಪಂತ್ಗೆ ಆಯ್ಕೆ ಸಮಿತಿ ಚಾನ್ಸ್ ನೀಡುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.
ಮೂರು ಟಿ-20 ಪಂದ್ಯಗಳ ವೇಳಾಪಟ್ಟಿ
- ಮೊದಲ ಟಿ20: ಸೆಪ್ಟೆಂಬರ್ 15
- ದ್ವಿತೀಯ ಟಿ20: ಸೆಪ್ಟೆಂಬರ್ 18
- ತೃತೀಯ ಟಿ20: ಸೆಪ್ಟೆಂಬರ್ 22
ಮುಂಬರುವ 2020ರ ಟಿ-20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಆಯ್ಕೆ ಸಮಿತಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದ್ದು, ಈಗಾಗಲೇ ವೆಸ್ಟ್ ಇಂಡೀಸ್ನಲ್ಲಿ ಟಿಇ20 ಸರಣಿಯಲ್ಲಿ ಕಣಕ್ಕಿಳಿದಿದ್ದ ತಂಡವನ್ನೇ ದಕ್ಷಿಣ ಆಫ್ರಿಕಾ ವಿರುದ್ಧ ಇಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇದರ ಜತೆಗೆ ವಿಕೆಟ್ ಕೀಪಿಂಗ್ಗಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಮೇಲೂ ಆಯ್ಕೆ ಸಮಿತಿ ಕಣ್ಣಿಟ್ಟಿದೆ ಎಂದು ತಿಳಿದು ಬಂದಿದೆ.