ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿದ್ದಾರೆ.
-
1st T20I. India win the toss and elect to field https://t.co/clgBCHM6vv #IndvWI @Paytm
— BCCI (@BCCI) December 6, 2019 " class="align-text-top noRightClick twitterSection" data="
">1st T20I. India win the toss and elect to field https://t.co/clgBCHM6vv #IndvWI @Paytm
— BCCI (@BCCI) December 6, 20191st T20I. India win the toss and elect to field https://t.co/clgBCHM6vv #IndvWI @Paytm
— BCCI (@BCCI) December 6, 2019
ಕಳೆದ ಆಗಸ್ಟ್ನಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ಮೂರೂ ಫಾರ್ಮೆಟ್ಗಳಲ್ಲೂ ಕೆರಿಬಿಯನ್ಸ್ ತಂಡದ ವಿರುದ್ಧ ಜಯ ಸಾಧಿಸಿತ್ತು. ಅಲ್ಲದೆ ಕಳೆದ ತಿಂಗಳು ನಡೆದ ಬಾಂಗ್ಲಾ ವಿರುದ್ಧದ ಟಿ-20 ಸರಣಿಯಲ್ಲೂ ಜಯ ಸಾಧಿಸಿರುವ ಟೀಂ ಇಂಡಿಯಾ ಕೆರಿಬಿಯನ್ನರನ್ನು ಸೋಲಿಸುವ ಹುಮ್ಮಸ್ಸಿನಲ್ಲಿದೆ.
ಬಾಂಗ್ಲಾ ವಿರುದ್ಧದ ಸರಣಿ ವೇಳೆ ವಿಶ್ರಾಂತಿ ಪಡೆದುಕೊಂಡಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ವಾಪಾಸ್ ಆಗಿದ್ದಾರೆ. ಆರಂಭಿಕನಾಗಿ ರೋಹಿತ್ ಶರ್ಮಾ ಜೊತೆ ಕನ್ನಡಿಗ ಕೆ.ಎಲ್.ರಾಹುಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಇತ್ತ ಬೌಲಿಂಗ್ ವಿಭಾಗದಲ್ಲೂ ಕೊಹ್ಲಿ ಪಡೆ ಬಲಿಷ್ಠವಾಗಿದೆ. ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಟೀಂ ಇಂಡಿಯಾದ ಬೌಲಿಂಗ್ ಶಕ್ತಿಯಾಗಿದ್ದಾರೆ. ಬಾಂಗ್ಲಾ ವಿರುದ್ಧ ಮಿಂಚಿದ್ದ ದೀಪಕ್ ಚಹಾರ್ ಮತ್ತು ಶಿವಂ ದುಬೆ ಕೂಡ ಉತ್ತಮ ಪ್ರದರ್ಶನ ನೀಡಬಲ್ಲರು. ಸ್ಪಿನ್ನಿಂಗ್ ವಿಭಾಗದಲ್ಲಿ ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಕೂಡ ಕೆರಿಬಿಯನ್ನರನ್ನ ಕಟ್ಟಿಹಾಕುವ ಶಕ್ತಿ ಹೊಂದಿದ್ದಾರೆ.
ಇತ್ತ ಕೆರಿಬಿಯನ್ನರು ಕೂಡ ಟೀಂ ಇಂಡಿಯಾ ಮಣಿಸಲು ಭರ್ಜರಿ ತಯಾರಿ ನಡೆಸಿದ್ದಾರೆ. ನೆಟ್ನಲ್ಲಿ ಸಾಕಷ್ಟು ಬೆವರು ಹರಿಸಿರುವ ವಿಂಡೀಸ್ ಆಟಗಾರರು ಭಾರತದ ವಿರುದ್ಧ ಉತ್ತಮ ಪ್ರದರ್ಶನ ನೀಡುವ ಹುಮ್ಮಸ್ಸಿನಲ್ಲಿದ್ದಾರೆ.
ಸಂಭಾವ್ಯ ತಂಡಗಳು:
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ದೀಪಕ್ ಚಹರ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್
ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್(ನಾಯಕ) ಫೇಬಿಯನ್ ಅಲೆನ್, ಬ್ರಾಂಡನ್ ಕಿಂಗ್, ದಿನೇಶ್ ರಾಮ್ದಿನ್, ಶೆಲ್ಡನ್ ಕಾಟ್ರೆಲ್,ಎವಿನ್ ಲೆವಿಸ್,ಶೆಫಾನೆ ರುದರ್ಫೋರ್ಡ್, ಶಿಮ್ರನ್ ಹೇಟ್ಮಯರ್, ಖ್ಯಾರಿ ಪೀರೆ, ಲೆಂಡ್ಲ್ ಸಿಮನ್ಸ್, ಹೇಡನ್ ವಾಲ್ಶ್ ಜೂ., ಕೀಮೋ ಪೌಲ್, ನಿಕೋಲಸ್ ಪೂರನ್, ಕೆಸ್ರಿಕ್ ವಿಲಿಯಮ್ಸ್