ಚೆನ್ನೈ: ಮೂರು ದಿನಗಳ ಕಾಲ ಕ್ವಾರಂಟೈನ್ಗೊಳಾಗಿದ್ದ ಟೀಂ ಇಂಡಿಯಾ ಕ್ರಿಕೆಟರ್ಸ್ಗೆ ಇಂದು ನಡೆಸಿರುವ ಕೋವಿಡ್ ವರದಿ ರಿಪೋರ್ಟ್ ನೆಗೆಟಿವ್ ಬಂದಿರುವ ಕಾರಣ ಅವರು ನಾಳೆಯಿಂದ ನೆಟ್ನಲ್ಲಿ ಅಭ್ಯಾಸ ನಡೆಸಲಿದ್ದಾರೆ.
ಫೆ.5ರಿಂದ ಚೆನ್ನೈ ಪಿ.ಚಿದಂಬರಂ ಮೈದಾನದಲ್ಲಿ ಇಂಗ್ಲೆಂಡ್ - ಭಾರತ ತಂಡಗಳ ನಡುವೆ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಗೊಳ್ಳಲಿದ್ದು, ಅದಕ್ಕಾಗಿ ಉಭಯ ತಂಡಗಳು ಈಗಾಗಲೇ ಚೆನ್ನೈನಲ್ಲಿ ಬೀಡು ಬಿಟ್ಟಿವೆ.
ಇಂದು ಬೆಳಗ್ಗೆ ಎಲ್ಲ ಪ್ಲೇಯರ್ಸ್ಗಳನ್ನ ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಇನ್ನು ಇಂಗ್ಲೆಂಡ್ ಕ್ರಿಕೆಟರ್ಸ್ ಕೂಡ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಉಭಯ ತಂಡದ ಪ್ಲೇಯರ್ಸ್ ನಾಳೆಯಿಂದ ನೆಟ್ನಲ್ಲಿ ಅಭ್ಯಾಸ ನಡೆಸಲು ಮುಂದಾಗಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆವರು ಹರಿಸಲಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಟೀಂ ಇಂಡಿಯಾ ಲಗ್ಗೆ ಹಾಕಬೇಕಾದರೆ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಿಂದ ಸರಣಿ ಕೈವಶ ಮಾಡಿಕೊಳ್ಳಬೇಕಾಗಿದೆ. ಒಂದು ವೇಳೆ, ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯ ಕೈಚೆಲ್ಲಿದರೆ ಮುಂದಿನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಾದ ಅನಿವಾರ್ಯತೆ ನಿರ್ಮಾಣಗೊಳ್ಳಲಿದೆ.