ದುಬೈ: 13ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವಿನ ನಗೆ ಬೀರಿ ನಂತರದ ಪಂದ್ಯದಲ್ಲಿ ಸೋಲು ಕಂಡಿದ್ದ ಆರ್ಸಿಬಿ ನಿನ್ನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್ ಓವರ್ನಲ್ಲಿ ಜಯ ಸಾಧಿಸಿದೆ. ಈ ಮೂಲಕ ವಿರಾಟ್ ಪಡೆ ಗೆಲುವಿನ ಲಯಕ್ಕೆ ಮರಳಿದೆ.
ವಿಶೇಷವಾಗಿ ತಂಡದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದ ಆರಂಭಿಕ ಆಟಗಾರ ಆ್ಯರೊನ್ ಫಿಂಚ್ ಇದೀಗ ಲಯಕ್ಕೆ ಮರಳಿದ್ದಾರೆ. ಇದರ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಎಬಿಡಿ, ಶಿವಂ ದುಬೆ ತಂಡಕ್ಕೆ ಆಸರೆಯಾಗಿದ್ದಾರೆ. ಆದರೆ ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮೂರು ಪಂದ್ಯಗಳಾದ್ರೂ ಕಳಪೆ ಬ್ಯಾಟಿಂಗ್ ಮುಂದುವರೆಸಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 14 ರನ್ ಗಳಿಸಿದ್ದ ಕ್ಯಾಪ್ಟನ್ ಕೊಹ್ಲಿ, ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ನಿನ್ನೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲೂ ಬರೋಬ್ಬರಿ 11 ಎಸೆತಗಳನ್ನು ಎದುರಿಸಿ ಕೇವಲ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.
-
Thrilling game of cricket. Proud of the character shown by the team. 💪💪 @RCBTweets #PlayBold pic.twitter.com/k8Jqb8Bg1S
— Virat Kohli (@imVkohli) September 28, 2020 " class="align-text-top noRightClick twitterSection" data="
">Thrilling game of cricket. Proud of the character shown by the team. 💪💪 @RCBTweets #PlayBold pic.twitter.com/k8Jqb8Bg1S
— Virat Kohli (@imVkohli) September 28, 2020Thrilling game of cricket. Proud of the character shown by the team. 💪💪 @RCBTweets #PlayBold pic.twitter.com/k8Jqb8Bg1S
— Virat Kohli (@imVkohli) September 28, 2020
ಆಡಿರುವ ಮೂರು ಪಂದ್ಯಗಳಿಂದ ವಿರಾಟ್ ಕೊಹ್ಲಿ ಕೇವಲ 18 ರನ್ ಗಳಿಸಿದ್ದು, ಇದು ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಮುಂದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ನಲ್ಲಿ ಅಬ್ಬರಿಸದೇ ಹೋದರೆ ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆಗಳಿವೆ.