ದುಬೈ: ಗಾಯಗೊಂಡು ತಂಡದಿಂದ ಹೊರಬಿದ್ದಿದ್ದ ಡೆಲ್ಲಿ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಪಂಜಾಬ್ ವಿರುದ್ಧ ಇಂದು ಡೆಲ್ಲಿ ಕ್ಯಾಪಿಟಲ್ ಸೆಣಸಾಟ ನಡೆಸಲಿದ್ದು, ಈ ವೇಳೆ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುವ ಸಾಧ್ಯತೆ ಇದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದ ವೇಳೆ ಕಾಲಿನ ಗಾಯಕ್ಕೊಳಗಾಗಿದ್ದ ವಿಕೆಟ್ ಕೀಪರ್ಗೆ ಒಂದು ವಾರಗಳ ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದರು.
ಇದೇ ವಿಚಾರವಾಗಿ ಮಾತನಾಡಿದ್ದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್, ಒಂದು ವಾರಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲು ವೈದ್ಯರು ಸೂಚನೆ ನೀಡಿದ್ದರಿಂದ ಮುಂದಿನ ಕೆಲ ಪಂದ್ಯಗಳಿಂದ ರಿಷಭ್ ಹೊರಗುಳಿಯಲಿದ್ದಾರೆ ಎಂದಿದ್ದರು. ಇದೀಗ ಸಂಪೂರ್ಣವಾಗಿ ಗುಣಮುಖರಾಗಿರುವ ಅವರು ತಂಡ ಸೇರಿಕೊಳ್ಳಲಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಇಲ್ಲಿಯವರೆಗೆ 9 ಪಂದ್ಯಗಳನ್ನಾಡಿದ್ದು, ಅದರಲ್ಲಿ 7 ಗೆಲುವು ಸಾಧಿಸಿ 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.