ದುಬೈ: 13ನೇ ಆವೃತ್ತಿಯ 19ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಆರ್ಸಿಬಿ ನಾಯಕ ವಿರಾಟ್ಮ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ.
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೇಸಿಂಗ್ ಮಾಡಲು ತಿರ್ಮಾನಿಸಿದ್ದಾರೆ.
ಎರಡು ತಂಡಗಳು ಟೂರ್ನಮೆಂಟ್ನಲ್ಲಿ ತಲಾ 3 ಗೆಲುವು ಹಾಗೂ ಒಂದು ಸೋಲು ಕಂಡಿವೆ. ಆದರೆ ಉತ್ತಮ ರನ್ ರೇಟ್ ಆಧಾರದ ಮೇಲೆ ಡೆಲ್ಲಿ ತಂಡ ಆರ್ಸಿಬಿಗಿಂತ ಮೇಲಿನ ಸ್ಥಾನದಲ್ಲಿದೆ.
ಈ ಪಂದ್ಯದಲ್ಲಿ ಡೆಲ್ಲಿ ತಂಡದಲ್ಲಿ ಅಮಿತ್ ಮಿಶ್ರಾ ಬದಲು ಅಕ್ಷರ್ ಪಟೇಲ್ ಆಡಲಿದ್ದಾರೆ. ಆರ್ಸಿಬಿ ತಂಡದಲ್ಲಿ ಜಂಪಾ ಬದಲಿಗೆ ಮೊಯಿನ್ ಅಲಿ ಹಾಗೂ ಗುರುಕಿರಾತ್ ಮನ್ ಬದಲು ಸಿರಾಜ್ ಅವಕಾಶ ಪಡೆದಿದ್ದಾರೆ.
-
#RCB have won the toss and they will bowl first against #DC in Match 19 of #Dream11IPL.#RCBvDC pic.twitter.com/a63o1mUDja
— IndianPremierLeague (@IPL) October 5, 2020 " class="align-text-top noRightClick twitterSection" data="
">#RCB have won the toss and they will bowl first against #DC in Match 19 of #Dream11IPL.#RCBvDC pic.twitter.com/a63o1mUDja
— IndianPremierLeague (@IPL) October 5, 2020#RCB have won the toss and they will bowl first against #DC in Match 19 of #Dream11IPL.#RCBvDC pic.twitter.com/a63o1mUDja
— IndianPremierLeague (@IPL) October 5, 2020
ಎರಡೂ ತಂಡದ ಬ್ಯಾಟ್ಸ್ಮನ್ಗಳು ಉತ್ತಮ ಫಾರ್ಮ್ನಲ್ಲಿದ್ದು, ಇಂದಿನ ಪಂದ್ಯ ರೋಚಕ ಹೋರಾಟಕ್ಕೆ ಸಾಕ್ಷಿಗಾಲಿದೆ. ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಉಭಯ ತಂಡಗಳು ನಾಲ್ಕನೇ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ಗೆದ್ದ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಲಿದೆ.
ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಮತ್ತು ಬೆಂಗಳೂರು ತಂಡಗಳು 23 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಆರ್ಸಿಬಿ 14 ಪಂದ್ಯಗಳಲ್ಲಿ ಗೆಲುವು ಕಂಡಿದ್ರೆ, ಡೆಲ್ಲಿ 8 ಪಂದ್ಯದಲ್ಲಿ ಜಯ ಸಾಧಿಸಿದೆ. ಒಂದು ಪಂದ್ಯ ಯಾವುದೇ ಫಲಿತಾಂಶ ಕಂಡಿಲ್ಲ.
ದೆಹಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ವಿ.ಕೀ), ಶಿಮ್ರಾನ್ ಹೆಟ್ಮೈರ್, ಮಾರ್ಕಸ್ ಸ್ಟೊಯ್ನಿಸ್, ರವಿಚಂದ್ರನ್ ಅಶ್ವಿನ್, ಆಕ್ಸರ್ ಪಟೇಲ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಆ್ಯನ್ರಿಚ್ ನಾರ್ಟ್ಜ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿ.ಕೀ), ಮೊಯಿನ್ ಅಲಿ, ಶಿವಮ್ ಡುದುಬೆ, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜವೇಂದ್ರ ಚಹಲ್