ಕೇಪ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ನಲ್ಲಿ 5 ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 28ನೇ ಬಾರಿ ಐದು ವಿಕೆಟ್ ಗೊಂಚಲು ಪಡೆದ ದಾಖಲೆಗೆ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಪಾತ್ರರಾಗಿದ್ದಾರೆ.
ಜೇಮ್ಸ್ ಆ್ಯಂಡರ್ಸನ್ 3ನೇ ದಿನದಾಟದಲ್ಲಿ ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್, ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೋ ರಬಾಡ, ಆ್ಯನ್ರಿಚ್ ಅವರ ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 28 ನೇ ಬಾರಿ 5 ವಿಕೆಟ್ ಸಾಧನೆ ಮಾಡಿದರು. ಈ ಮೂಲಕ ಭಾರತದ ರವಿಚಂದ್ರನ್ ಅಶ್ವಿನ್ ಹಾಗೂ ಇಂಗ್ಲೆಂಡ್ ಇಯಾನ್ ಬಾಥಮ್ ದಾಖಲೆಯನ್ನು ಮುರಿದು ಮುನ್ನುಗ್ಗಿದರು.
ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚು ಬಾರಿ ಐದು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಆ್ಯಂಡರ್ಸನ್ 8ನೇ ಸ್ಥಾನಕ್ಕೇರಿದ್ದಾರೆ. ಶ್ರೀಲಂಕಾದ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ 67 ಬಾರಿ ಟೆಸ್ಟ್ ಕ್ರಿಕೆಟ್‌ನಲ್ಲಿ 5 ವಿಕೆಟ್ ಗೊಂಚಲು ಪಡೆದು ಮೊದಲ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾದ ಶೇನ್ ವಾರ್ನ್(37), ನ್ಯೂಜಿಲ್ಯಾಂಡ್ನ ರಿಚರ್ಡ್ ಹ್ಯಾಡ್ಲಿ(36), ಭಾರತದ ಅನಿಲ್ ಕುಂಬ್ಳೆ (35) ರಂಗನಾ ಹೆರಾತ್(34), ಗ್ಲೆನ್ ಮೆಕ್ಗ್ರಾತ್(29) ನಂತರದ ಸ್ಥಾನದಲ್ಲಿದ್ದಾರೆ.
ಈ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 269 ರನ್ಗಳಿಸಿತ್ತು. ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 223 ರನ್ಗಳಿಗೆ ಆಲೌಟ್ ಆಗಿದೆ. 46 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ 4 ವಿಕೆಟ್ ಕಳೆದುಕೊಂಡು 218 ರನ್ಗಳಿಸಿದ್ದು, ಒಟ್ಟಾರೆ 264 ರನ್ಗಳ ಮುನ್ನಡೆ ಸಾಧಿಸಿದೆ.