ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ನಲ್ಲಿ (ಕೆಪಿಎಲ್) ಸ್ಪಾಟ್ ಫಿಕ್ಸಿಂಗ್ ನಡೆಸಿದ್ದಾರೆ ಎಂಬ ಆರೋಪದಡಿ ರಾಜ್ಯದ ಕ್ರಿಕೆಟಿಗರಾದ ಸಿ.ಎಂ.ಗೌತಮ್ ಹಾಗೂ ಅಬ್ರಾರ್ ಖಾಜಿಯನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಈ ಇಬ್ಬರು ಆಟಗಾರರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.
2019ರ ಕೆಪಿಎಲ್ ಟೂರ್ನಿಯ ಬಳ್ಳಾರಿ ಟಸ್ಕರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ನಡುವೆ ನಡೆದಿದ್ದ ಫೈನಲ್ ಪಂದ್ಯದಲ್ಲಿ ಸಿ.ಎಂ. ಗೌತಮ್ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ ಎಂಬ ಆರೋಪದಡಿ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗುವ ಸೈಯದ್ ಮುಷ್ತಾಕ್ ಅಲಿ ಟಿ-20 ಟ್ರೋಫಿಯಲ್ಲಿ ಈ ಇಬ್ಬರು ಆಟಗಾರರು ಸ್ಥಾನ ಕಳೆದುಕೊಂಡಿದ್ದಾರೆ.
ನಾಳೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮಿಝೋರಾಂ-ಮುಂಬೈ ಪಂದ್ಯದಲ್ಲಿ ಮಿಝೋರಾಂ ತಂಡದಲ್ಲಿ ಆಡಬೇಕಿದ್ದ ಅಬ್ರಾರ್ ಖಾಜಿ ಹಾಗೂ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಗೋವಾ-ಬರೋಡಾ ತಂಡಗಳ ನಡುವೆ ಗೋವಾ ಪರ ಆಡಬೇಕಿದ್ದ ಗೌತಮ್ಗೆ ಗೇಟ್ ಪಾಸ್ ನೀಡಲಾಗಿದೆ.
ದರ್ಶನ್ ಮಿಶಾಲ್ರನ್ನ ನಾಯಕನಾಗಿ ಗೋವಾ ಕ್ರಿಕೆಟ್ ಸಂಸ್ಥೆ ಆಯ್ಕೆ ಮಾಡಿದೆ. ಸದ್ಯ ಇಬ್ಬರು ಆಟಗಾರರನ್ನು ಏಳು ದಿನ ಸಿಸಿಬಿ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದೆ.