ETV Bharat / sports

ಟಿ-20 ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆ ಬರೆದ ಕನ್ನಡಿಗ - ಕೃಷ್ಣಪ್ಪ ಗೌತಮ್

ಟಿ-20 ಕ್ರಿಕೆಟ್ ಇತಿಹಾಸದಲ್ಲೆ ಕನ್ನಡಿಗ ಕೃಷ್ಣಪ್ಪ ಗೌತಮ್ ಹೊಸದೊಂದು ದಾಖಲೆ ಬರೆದಿದ್ದಾರೆ.

ಕೃಷ್ಣಪ್ಪ ಗೌತಮ್
author img

By

Published : Aug 24, 2019, 3:38 AM IST

Updated : Aug 24, 2019, 12:01 PM IST

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಪ್ರೀಮಿಯರ್ ಲೀಗ್​ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿದ ಕೃಷ್ಣಪ್ಪ ಗೌತಮ್ ಬೌಲಿಂಗ್​ನಲ್ಲೂ ಉತ್ತಮ ಪ್ರದರ್ಶನ ತೋರಿ 4 ಓವರ್​ಗಳಲ್ಲಿ 8ವಿಕೆಟ್ ಪಡೆದು ಮಿಂಚಿದ್ದಾರೆ.

ಶಿವಮೊಗ್ಗ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಬಳ್ಳಾರಿ ಟಸ್ಕರ್ಸ್ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗೌತಮ್, ಶಿವಮೊಗ್ಗ ಲಯನ್ಸ್ ಬೌಲರ್​ಗಳನ್ನ ಬೆಂಡೆತ್ತಿ, ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿದರು. ಒಟ್ಟು 56 ಎಸೆತಗಳಲ್ಲಿ 13 ಸಿಕ್ಸರ್​ ಮತ್ತು 7 ಬೌಂಡರಿಗಳ ನೆರವಿನಿಂದ 134 ರನ್​ ಗಳಿಸಿದರು.

ಬರಿ ಬ್ಯಾಟ್​ನಿಂದ ಅಷ್ಟೆ ಅಲ್ಲದೆ ಬೌಲಿಂಗ್​ನಲ್ಲೂ ಮಿಂಚಿದ ಗೌತಮ್ 4 ಓವರ್​ಗಳಲ್ಲಿ ಕೇವಲ 15ರನ್​​ ನೀಡಿ 8 ವಿಕೆಟ್​ ಪಡೆದುಕೊಂಡಿದ್ದಾರೆ. ಈ ಮೂಲಕ ಟಿ-20 ಪಂದ್ಯವೊಂದರಲ್ಲೆ ಅತಿಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

Intro:Body:Conclusion:
Last Updated : Aug 24, 2019, 12:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.