ರಾಂಚಿ: ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಿಂದ ಹೊರ ಬಿದ್ದಿದ್ದಾರೆ. ಅವರ ಸ್ಥಾನದಲ್ಲಿ ಸ್ಥಳೀಯ ಯುವ ಬೌಲರ್ ಸ್ಥಾನ ಪಡೆದುಕೊಂಡಿದ್ದಾರೆ.
ಎಡಗೈ ಸ್ಪಿನ್ನರ್ ಶಹ್ಬಾಜ್ ನದೀಮ್ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿರುವ ನದೀಮ್, ಜಾರ್ಖಂಡ್ ಮತ್ತು ಭಾರತ ಎ ತಂಡದ ಹಲವು ಗೆಲುವುಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕುಲ್ದೀಪ್ ಬದಲು ನದೀಮ್ ಅವರನ್ನ ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
110 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನ ಆಡಿರುವ ಶಹ್ಬಾಜ್ ನದೀಮ್ 424 ವಿಕೆಟ್ ಪಡೆದುಕೊಂಡಿದ್ದಾರೆ. 19 ಬಾರಿ 5 ವಿಕೆಟ್ಗಳ ಗುಚ್ಚ ಪಡೆದಿದ್ದರೆ 5 ಬಾರಿ 10 ವಿಕೆಟ್ಗಳ ಗುಚ್ಚ ಕಬಳಿಸಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 2018ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಿ-20 ಟೂರ್ನಿಯಲ್ಲಿ ಸ್ಥಾನ ಪಡೆದಿದ್ದ ನದೀಮ್ 11 ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ.