ETV Bharat / sports

ಟಿ-20 ವಿಶ್ವಕಪ್​ ಬಗ್ಗೆ ಚಿಂತೆ ಇಲ್ಲ.. ಸಿಕ್ಕಿರುವ ಅವಕಾಶ ಕೈ ಬಿಡಲ್ಲ: ಕೆ.ಎಲ್.ರಾಹುಲ್

ನನಗೆ 2020ರ ವಿಶ್ವಕಪ್ ಟೂರ್ನಿಗೆ ಆಯ್ಕೆ ಬಗ್ಗೆ ಯಾವುದೇ ಚಿಂತೆ ಇಲ್ಲ. ಅದಕ್ಕೆ ಇನ್ನು ಸಾಕಷ್ಟು ಸಮಯವಿದೆ ಎಂದು ಕನ್ನಡಿಗ ಕೆ.ಎಲ್.ರಾಹುಲ್ ಹೇಳಿದ್ದಾರೆ.

author img

By

Published : Dec 7, 2019, 6:31 PM IST

Looking forward to make best use of opening opportunity, ಸಿಕ್ಕಿರುವ ಅವಕಾಶ ಕೈ ಬಿಡಲ್ಲ ಎಂದ ರಾಹುಲ್
ಕೆ.ಎಲ್.ರಾಹುಲ್

ಹೈದರಾಬಾದ್: ನಿನ್ನೆ ನಡೆದ ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಜಯ ದಾಖಲಿಸಿದೆ. ಈ ಗೆಲುವಿನಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು.

ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್, ಬಿರುಸಿನ ಬ್ಯಾಟಿಂಗ್ ನಡೆಸಿ ಉಪಯುಕ್ತ 62 ರನ್​ಗಳ ಕಾಣಿಕೆ ನೀಡಿದ್ರು. ನಾಯಕ ಕೊಹ್ಲಿ ಜೊತೆಗೂಡಿ 100 ರನ್ ಜೊತೆಯಾಟವಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್​ನಲ್ಲಿ ಒಂದು ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ರು.

ಪಂದ್ಯ ಮುಗಿದ ಬಳಿಕ ಮಾತನಾಡಿದ ರಾಹುಲ್, ಹಲವು ಸರಣಿಗಳ ನಂತರ ಅರಂಭಿಕನಾಗಿ ಕಣಕ್ಕಿಳಿಯುವ ಅವಕಾಶ ಸಿಕ್ಕಿದೆ. ಈ ಅವಕಾಶವನ್ನ ನಾನು ಸದುಪಯೋಗ ಪಡಿಸಿಕೊಳ್ಳುವತ್ತ ಗಮನ ಹರಿಸುತ್ತಿದ್ದೇನೆ. ಇಂದು ಉತ್ತಮ ಪ್ರದರ್ಶನ ನೀಡಿದ್ದು ಸಂತಸ ತಂದಿದೆ. ಮುಂದಿನ ಪಂದ್ಯಗಳಲ್ಲೂ ಇದನ್ನೇ ಮುಂದುವರೆಸುತ್ತೇನೆ. ನನಗೆ 2020ರ ವಿಶ್ವಕಪ್ ಟೂರ್ನಿ ಆಯ್ಕೆ ಬಗ್ಗೆ ಯಾವುದೇ ಚಿಂತೆ ಇಲ್ಲ. ಅದಕ್ಕೆ ಇನ್ನು ಸಾಕಷ್ಟು ಸಮಯವಿದೆ. ನನಗೆ ಸಿಕ್ಕಿರುವ ಅವಕಾಶವನ್ನ ಕೈ ಚೆಲ್ಲಲು ಇಷ್ಟವಿಲ್ಲ. ಅದರ ಸದುಪಯೋಗ ಪಡಿಸಿಕೊಳ್ಳುವೆ ಎಂದಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.