ಢಾಕಾ: ಬಾಂಗ್ಲಾದೇಶದ ಕ್ರಿಕೆಟಿಗ ಮುಶ್ರಫೆ ಮೊರ್ತಾಜ ಕೊರೊನಾ ವೈರಸ್‌ನಿಂದ ಬಳಲುತ್ತಿದ್ದಾರೆ.
ಸುಮಾರು 10 ದಿನಗಳಿಂದ ಕೋವಿಡ್ ಲಕ್ಷಣಗಳು ಇವರಲ್ಲಿ ಕಾಣಿಸಿಕೊಂಡಿದ್ದವು. ಆದರೆ ತದನಂತರ ಚೇತರಿಸಿಕೊಂಡಿದ್ದರು. ಇದಾದ ಬಳಿಕ ಕಳೆದ 3-4 ದಿನಗಳಿಂದ ಜ್ವರ ಹಾಗೂ ಶೀತ ಕಾಣಿಸಿಕೊಂಡಿದ್ದು, ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಇರುವುದು ಕನ್ಫರ್ಮ್ ಆಗಿದೆ.
ಬಾಂಗ್ಲಾದೇಶದ ಕ್ಯಾಪ್ಟನ್ ಆಗಿದ್ದ 36 ವರ್ಷದ ಮುಶ್ರಫೆ ಮೊರ್ತಾಜ 36 ಟೆಸ್ಟ್ ಪಂದ್ಯ ಹಾಗೂ 220 ಏಕದಿನ ಪಂದ್ಯ ಹಾಗೂ 54 ಟಿ-20 ಪಂದ್ಯಗಳಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಪಾಕ್ನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಗೂ ಕೊರೊನಾ ವೈರಸ್ ದೃಢಪಟ್ಟಿತ್ತು.