ಅಡಿಲೇಡ್ (ಆಸ್ಟ್ರೇಲಿಯಾ): ಟೀಂ ಇಂಡಿಯಾ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತದ 3ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನ ಸ್ಟಾರ್ಕ್ ಎಸೆತದಲ್ಲಿ ಬೌಂಡರಿ ಸಿಡಿಸಿದ ಅಗರ್ವಾಲ್, ಈ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಸಾವಿರ ರನ್ ಪೂರೈಸಲು ಮಯಾಂಕ್ 19 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.
-
Mayank Agarwal becomes the third-fastest Indian batsman to 1000 Test runs 👏 https://t.co/EcYkHG53Aa #AUSvIND pic.twitter.com/gtM8cD144y
— ESPNcricinfo (@ESPNcricinfo) December 19, 2020 " class="align-text-top noRightClick twitterSection" data="
">Mayank Agarwal becomes the third-fastest Indian batsman to 1000 Test runs 👏 https://t.co/EcYkHG53Aa #AUSvIND pic.twitter.com/gtM8cD144y
— ESPNcricinfo (@ESPNcricinfo) December 19, 2020Mayank Agarwal becomes the third-fastest Indian batsman to 1000 Test runs 👏 https://t.co/EcYkHG53Aa #AUSvIND pic.twitter.com/gtM8cD144y
— ESPNcricinfo (@ESPNcricinfo) December 19, 2020
ಓದಿ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಟೀಂ ಇಂಡಿಯಾ ಕಳಪೆ ಪ್ರದರ್ಶನ: 36ಕ್ಕೆ 9 ವಿಕೆಟ್ ಕಳೆದುಕೊಂಡ ವಿರಾಟ್ ಪಡೆ
ಟೀಂ ಇಂಡಿಯಾ ಮಾಜಿ ಆಟಗಾರ ವಿನೋದ್ ಕಾಂಬ್ಲಿ 14 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ರೆ, ಚೇತೇಶ್ವರ ಪೂಜಾರ 18 ಇನ್ನಿಂಗ್ಸ್‌ಗಳಲ್ಲಿ ಸಾವಿರ ರನ್ ಪೂರೈಸಿ ಎರಡನೇ ಸ್ಥಾನದಲ್ಲಿದ್ದಾರೆ. ಸುನಿಲ್ ಗವಾಸ್ಕರ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಸಾವಿರ ರನ್ ಗಳಿಸಲು 21 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.