ಮುಂಬೈ: ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಮಾಡಿ ಇನ್ನೂ ಒಂದು ವರ್ಷ ಪೂರೈಸದ ಮಯಾಂಕ್ ಅಗರ್ವಾಲ್ ಆಡಿರುವ 8 ಪಂದ್ಯಗಳ ಪ್ರದರ್ಶನದಿಂದಲೇ ಐಸಿಸಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಜೀವನ ಶ್ರೇಷ್ಠ ಸಾಧನೆ ಮೆರೆದಿದ್ದಾರೆ.
ಬಾಂಗ್ಲಾದೇಶದ ವಿರುದ್ಧ ಪಂದ್ಯಕ್ಕೂ ಮುನ್ನ 18 ಶ್ರೇಯಾಂಕದಲ್ಲಿದ್ದ ಮಯಾಂಕ್ ಮೊದಲ ಟೆಸ್ಟ್ನಲ್ಲಿ ಆಕರ್ಷಕ ದ್ವಿಶತಕ ಸಿಡಿಸಿ 7 ಸ್ಥಾನ ಬಡ್ತಿ ಪಡೆದು 11ನೇ ಶ್ರೇಯಾಂಕ ಪಡೆದಿದ್ದಾರೆ. ಇನ್ನು, ಉಳಿದಂತೆ ಕೊಹ್ಲಿ 2ನೇ ಸ್ಥಾನದಲ್ಲಿ, ಪೂಜಾರ 4, ರಹಾನೆ 5 ರೋಹಿತ್ ಶರ್ಮಾ 10ನೇ ಶ್ರೇಯಾಂಕದಲ್ಲಿ ಮುಂದುವರಿದಿದ್ದಾರೆ. ಐಸಿಸಿ ಶ್ರೇಯಾಂಕ ಪಟ್ಟಿಯ ಟಾಪ್ 11ರಲ್ಲಿ ಭಾರತದ 5 ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
ಬೌಲಿಂಗ್ ಶ್ರೇಯಾಂಕದಲ್ಲಿ ಮೊಹಮ್ಮದ್ ಶಮಿ ಇದೇ ಬಾರಿಗೆ ಅಗ್ರ 10ರಲ್ಲಿ ಕಾಣಿಸಿಕೊಂಡಿದ್ದಾರೆ. ಬುಮ್ರಾ 4ನೇ ಸ್ಥಾನದಲ್ಲಿ ಮುಂದುವರಿದ್ದಾರೆ. ಆಲರೌಂಡರ್ ಸ್ಥಾನದಲ್ಲಿ ಜಡೇಜಾ 2ನೇ ಸ್ಥಾನದಲ್ಲಿ ಮುಂದುವರಿದರೆ, ಆರ್.ಅಶ್ವಿನ್ ಒಂದು ಸ್ಥಾನ ಏರಿಕೆ ಕಂಡು 4ನೇ ಸ್ಥಾನದಲ್ಲಿದ್ದಾರೆ.