ಚೆನ್ನೈ : ಐಪಿಎಲ್ನ ನಾಲ್ಕನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೊದಲ ಪಂದ್ಯದ ಗೆಲುವಿನ ವಿಶ್ವಾಸದಲ್ಲಿರುವ ಕೆಕೆಆರ್ ತಂಡ ಇಂದಿನ ಪಂದ್ಯದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ.
ಮುಂಬೈ ತಂಡಕ್ಕೆ ಖಾಯಂ ಆರಂಭಿಕ ಬ್ಯಾಟ್ಸ್ಮನ್ ಡಿಕಾಕ್ ಕ್ವಾರಂಟೈನ್ ಮುಗಿಸಿ ವಾಪಸ್ ಆಗಿರುವುದರಿಂದ ಕ್ರಿಸ್ ಲಿನ್ ಅನಿವಾರ್ಯವಾಗಿ ತಮ್ಮ ಆರಂಭಿಕ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ.
-
#KKR have won the toss and they will bowl first against #MumbaiIndians in Match 5 of #VIVOIPL.#KKRvMI pic.twitter.com/7plyJvbHdx
— IndianPremierLeague (@IPL) April 13, 2021 " class="align-text-top noRightClick twitterSection" data="
">#KKR have won the toss and they will bowl first against #MumbaiIndians in Match 5 of #VIVOIPL.#KKRvMI pic.twitter.com/7plyJvbHdx
— IndianPremierLeague (@IPL) April 13, 2021#KKR have won the toss and they will bowl first against #MumbaiIndians in Match 5 of #VIVOIPL.#KKRvMI pic.twitter.com/7plyJvbHdx
— IndianPremierLeague (@IPL) April 13, 2021
ಮುಂಬೈ ತಂಡ ಐಪಿಎಲ್ನಲ್ಲಿ ಕೆಕೆಆರ್ ವಿರುದ್ಧ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಆಡಿರುವ 27 ಪಂದ್ಯಗಳಲ್ಲಿ ರೋಹಿತ್ ಪಡೆ 21ರಲ್ಲಿ ಜಯ ಸಾಧಿಸಿದೆ. ಕೆಕೆಆರ್ ಕೇವಲ 6 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಹಾಗಾಗಿ ಅಂಕಿ ಅಂಶಗಳನ್ನು ನೋಡಿದರೆ ಮುಂಬೈ ತಂಡವೇ ಈ ಪಂದ್ಯವನ್ನು ಗೆಲ್ಲುವ ನೆಚ್ಚಿನ ತಂಡವಾಗಿದೆ..
ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸೆನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ಕೋಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ಸಿ), ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ಪ), ಶಕೀಬ್ ಅಲ್ ಹಸನ್, ಪ್ಯಾಟ್ ಕಮ್ಮಿನ್ಸ್, ಹರ್ಭಜನ್ ಸಿಂಗ್, ಪ್ರಸಿಧ್ ಕೃಷ್ಣ, ವರುಣ್ ಚಕ್ರವರ್ತಿ