ನವದೆಹಲಿ: ಭಾರತೀಯ ಅರೆಸೇನಾ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ಹೊಂದಿರುವ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಭಾರತೀಯ ಸೇನೆಯ ಬ್ರಾಂಡ್ ಅಂಬಾಸಿಡರ್ ಆಗಲಿದ್ದಾರೆ.
ಕೆಲ ದಿನಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿರುವ ಧೋನಿ ತಮ್ಮ ಇಚ್ಛೆಯಂತೆ ಸೇನೆಯ ಪ್ಯಾರಾಚೂಟ್ ರೆಜಿಮೆಂಟ್ ಸೇರಿದ್ದು, ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಈ ಮಧ್ಯೆ ಎಂ ಎಸ್ ಧೋನಿ ಅವರನ್ನ ಭಾರತೀಯ ಸೇನೆಗೆ ಬ್ರಾಂಡ್ ಅಂಬಾಸಿಡರ್ ಮಾಡುವ ಸಾಧ್ಯತೆ ಇದೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ ಅಂತಾ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ನಾಳೆ ಧೋನಿ ತಮ್ಮ ತಂಡದೊಂದಿಗೆ ಲಡಾಖ್ನ ಲೇಹ್ಗೆ ಪ್ರಯಾಣ ಬೆಳೆಸಲಿದ್ದಾರೆ. ಅವರ ತಂಡದಲ್ಲಿ ಧೋನಿ ಸ್ಫೂರ್ತಿ ತುಂಬುವ ವ್ಯಕ್ತಿಯಾಗಿದ್ದಾರೆ. ಸೈನಿಕರೊಂದಿಗೆ ಫುಟ್ಬಾಲ್ ಮತ್ತು ವಾಲಿಬಾಲ್ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಅಲ್ಲದೆ ಹೊಸದಾಗಿ ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ನ ಲೇಹ್ ಪ್ರದೇಶದಲ್ಲಿ ಸ್ವತಂತ್ರ ದಿನಾಚರಣೆ ದಿನ ಧೋನಿ ಧ್ವಜಾರೋಹಣ ನೆರವೇರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದ್ದು, ಇನ್ನೂ ಖಚಿತವಾಗಿಲ್ಲ.