ಸಿಡ್ನಿ: ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಸರಣಿಯಲ್ಲೇ ಯಾರ್ಕರ್ ಕಿಂಗ್ ಟಿ. ನಟರಾಜನ್ ಯಾರ್ಕರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಶ್ರೀಲಂಕಾದ ಲಸಿತ್ ಮಾಲಿಂಗ ಹಾಗೂ ಭಾರತದ ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಮಂಗಳವಾರ ಸಿಡ್ನಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನಟರಾಜನ್ ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯದಲ್ಲಿ 3 ವಿಕೆಟ್ಸ್, 2ನೇ ಪಂದ್ಯದಲ್ಲಿ 2 ಹಾಗೂ ಮೂರನೇ ಪಂದ್ಯದಲ್ಲಿ ಒಂದು ವಿಕೆಟ್ ಪಡೆದಿದ್ದಾರೆ. ಒಟ್ಟಾರೆ 3 ಪಂದ್ಯದಲ್ಲಿ 6 ವಿಕೆಟ್ ಪಡೆಯುವ ಮೂಲಕ ಸರಣಿಯಲ್ಲಿ ಗರಿಷ್ಟ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಈ ಹಿಂದೆ 2016ರಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ ಮತ್ತು 2017ರಲ್ಲಿ ಲಸಿತ್ ಮಾಲಿಂಗ ಮಾತ್ರ 6 ವಿಕೆಟ್ ಪಡೆದಿದ್ದರು. ಇದೀಗ ನಟರಾಜನ್ ಇಬ್ಬರು ಶ್ರೇಷ್ಠ ಬೌಲರ್ಗಳ ಸಾಲಿಗೆ ಸೇರ್ಪಡೆಗೊಂಡಿದ್ದಾರೆ.
ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 186 ರನ್ಗಳಿಸಿದೆ.
ಇದನ್ನು ಓದಿ: 'ಏನೂ ಸೌಲಭ್ಯವಿಲ್ಲದ ಜಮ್ಮುವಿನಿಂದ ಬಂದ ಅಬ್ದುಲ್ ಐಪಿಎಲ್ನಲ್ಲಿ ಅದ್ಭುತ ಸೃಷ್ಟಿಸಿದ್ರು'