ಅಡಿಲೇಡ್ : ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಸಿಡ್ನಿಯಲ್ಲೇ ನಡೆಯಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.
ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್, ನಾಲ್ಕನೇ ಪಂದ್ಯ ಸಿಡ್ನಿಯಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಆಸ್ಟ್ರೇಲಿಯಾದ ಪತ್ರಿಕೆಯೊಂದು ವರದಿ ಮಾಡಿತ್ತು. ಆದರೆ, "ಮೂರನೇ ಪಂದ್ಯಕ್ಕೆ ಇನ್ನೂ 2 ವಾರಗಳ ಸಮಯವಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಗಮನಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ" ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮಧ್ಯಂತರ ಸಿಇಒ ನಿಕ್ ಹಾಕ್ಲೆ ಹೇಳಿದ್ದಾರೆ.
"ನಾವು ನಮ್ಮ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೂರನೇ ಪಂದ್ಯ ನಡೆಸುವುದು ನಮ್ಮ ಆದ್ಯತೆಯಾಗಿ ಉಳಿದಿದೆ" ಎಂದು ಹೇಳಿದ್ದಾರೆ. "ಬೇಸಿಗೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಕೋವಿಡ್-19 ಹಾಟ್ಸ್ಪಾಟ್ ಮತ್ತು ಲಾಕ್ಡೌನ್ನಂತಹ ಸವಾಲುಗಳನ್ನು ಎದುರಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಸಜ್ಜಾಗಿದೆ.
-
Cricket Australia have issued a statement about the SCG Test and the city's COVID-19 outbreak #AUSvIND https://t.co/dA00lGzlEt
— cricket.com.au (@cricketcomau) December 20, 2020 " class="align-text-top noRightClick twitterSection" data="
">Cricket Australia have issued a statement about the SCG Test and the city's COVID-19 outbreak #AUSvIND https://t.co/dA00lGzlEt
— cricket.com.au (@cricketcomau) December 20, 2020Cricket Australia have issued a statement about the SCG Test and the city's COVID-19 outbreak #AUSvIND https://t.co/dA00lGzlEt
— cricket.com.au (@cricketcomau) December 20, 2020
ನಿಗದಿತ ದಿನದಲ್ಲಿ ಅಂತಾರಾಷ್ಟ್ರೀಯ ಮತ್ತು ದೇಶಿ ಕ್ರಿಕೆಟ್ ಪಂದ್ಯಗಳನ್ನು ನಡೆಸುವ ಉದ್ದೇಶದಿಂದ ಆಟಗಾರರು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಟಿಯಲ್ಲಿ ನಾವು ಸೂಕ್ತ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದೇವೆ" ಎಂದು ಹಾಕ್ಲೆ ಹೇಳಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11ರವರೆಗೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.