ಮುಂಬೈ: ಟೀಂ ಇಂಡಿಯಾ ಹಿರಿಯ ಪ್ಲೇಯರ್ ಎಂಎಸ್ ಧೋನಿ ನಿಗದಿತ ಓವರ್ಗಳ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿಗೆ ಆಯ್ಕೆ ಸಮಿತಿ ಮುಖ್ಯಸ್ಥ ಖಾರವಾಗಿ ಪ್ರತಿಕ್ರಿಯಿಸಿದ್ದು, ಅದೊಂದು ಸುಳ್ಳು ಸುದ್ದಿ ಎಂದು ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ಪ್ರಕಟಗೊಳಿಸಿ ಮಾತನಾಡಿದ ಅವರು, ಎಂಎಸ್ ಧೋನಿ ನಿವೃತ್ತಿ ಪಡೆದುಕೊಳ್ಳುವುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ತಿಳಿಸಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ದದ ಕ್ರಿಕೆಟ್ ಸರಣಿಯಿಂದ ಹೊರಗುಳಿದಿದ್ದ ಮಿಸ್ಟರ್ ಕೂಲ್, ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಕ್ರಿಕೆಟ್ ಸರಣಿಯಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಅವರು ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದರ ಮಧ್ಯೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಶೇರ್ ಮಾಡಿದ್ದ ಪೋಟೋವೊಂದು ಇದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು. ಕಳೆದ ಫೆಬ್ರುವರಿಯಲ್ಲಿ ಟೀಂ ಇಂಡಿಯಾ ಪರ ಕೊನೇಯ ಟಿ-20 ಪಂದ್ಯವನ್ನಾಡಿರುವ ಧೋನಿ ಸದ್ಯ ಕ್ರಿಕೆಟ್ನಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ.
ಅನುಮಾನ ಹುಟ್ಟಿಸಿದ ಕೊಹ್ಲಿ ಇನ್ಸ್ಟಾಗ್ರಾಂ ಪೋಟೊ!
ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಧೋನಿ ಪೋಟೋವೊಂದನ್ನು ಹಂಚಿಕೊಂಡಿದ್ದರು. ನಾನು ಯಾವತ್ತಿಗೂ ಮರೆಯಲಾಗದ ಪಂದ್ಯವಿದು. ಅವತ್ತು ಆ ಮನುಷ್ಯ ನನ್ನನ್ನು ಫಿಟ್ನೆಸ್ ಟೆಸ್ಟ್ಗೆ ಓಡಿಸುವ ಹಾಗೆ ಓಡಿಸಿದ್ದರು ಎಂದು ಬರೆದುಕೊಂಡಿದ್ದರು. 2016ರಲ್ಲಿ ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿನ ಪೋಟೋ ಕೊಹ್ಲಿ ಶೇರ್ ಮಾಡಿದ್ದು, ಆ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿತ್ತು.
-
A game I can never forget. Special night. This man, made me run like in a fitness test 😄 @msdhoni 🇮🇳 pic.twitter.com/pzkr5zn4pG
— Virat Kohli (@imVkohli) September 12, 2019 " class="align-text-top noRightClick twitterSection" data="
">A game I can never forget. Special night. This man, made me run like in a fitness test 😄 @msdhoni 🇮🇳 pic.twitter.com/pzkr5zn4pG
— Virat Kohli (@imVkohli) September 12, 2019A game I can never forget. Special night. This man, made me run like in a fitness test 😄 @msdhoni 🇮🇳 pic.twitter.com/pzkr5zn4pG
— Virat Kohli (@imVkohli) September 12, 2019
ಕೊಹ್ಲಿ ಪೋಟೋ ಶೇರ್ ಮಾಡಿರುವುದು ಧೋನಿಗೆ ಗೌರವ ಸಲ್ಲಿಸುವ ರೀತಿಯಲ್ಲಿರುವುದರಿಂದ ಅವರು ನಿವೃತ್ತಿ ಪಡೆದುಕೊಳ್ಳಲಿದ್ದಾರೆ ಎಂಬ ಮಾಹಿತಿ ಹಬ್ಬಿತ್ತು. ಆದರೆ ಇದೀಗ ಎಂಎಸ್ಕೆ ಪ್ರಸಾದ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಎಂಎಸ್ ಧೋನಿ ಪತ್ನಿ ಸಾಕ್ಷಿ ಸಿಂಗ್ ಇದೊಂದು ಊಹಾಪೋಹ ಸುದ್ದಿ ಎಂದು ಹೇಳಿದ್ದಾರೆ.
-
Its called rumours !
— Sakshi Singh 🇮🇳❤️ (@SaakshiSRawat) September 12, 2019 " class="align-text-top noRightClick twitterSection" data="
">Its called rumours !
— Sakshi Singh 🇮🇳❤️ (@SaakshiSRawat) September 12, 2019Its called rumours !
— Sakshi Singh 🇮🇳❤️ (@SaakshiSRawat) September 12, 2019